

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಇಂದು ಬೆಂಗಳೂರಿನ ಶ್ರೀನಿವಾಸಪುರದ ಕೋಗಿಲು ಲೇಔಟ್ನಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 200ಕ್ಕೂ ಹೆಚ್ಚು ಮನೆಗಳನ್ನು ನೆಲಸಮಗೊಳಿಸಿದೆ. 14 ಎಕರೆ ಪಾಲಿಕೆ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ 200ಕ್ಕೂ ಹೆಚ್ಚು ಮನೆಗಳನ್ನು ನೆಲಸಮಗೊಳಿಸಲಾಗಿದೆ. ಈ ಕುಟುಂಬಗಳು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು, ಮನೆ ನಿರ್ಮಿಸಿಕೊಂಡಿದ್ದರೆಂದು ಅಧಿಕಾರಿಗಳು ಆರೋಪಿಸಿದ್ದಾರೆ. ಮುಖ್ಯವಾಗಿ, ಒಂದು ವೇಳೆ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಲ್ಲಿ, ತೆರವುಗೊಳಿಸಲು ಮೂರು ತಿಂಗಳ ಮುನ್ನವೇ ನೋಟಿಸ್ ನೀಡಬೇಕು. ಭೂಮಿಯನ್ನು ಖಾಲಿ ಮಾಡುವಂತೆ ಸೂಚಿಸಬೇಕು. ಬಳಿಕ, ನಂತರದ ಕ್ರಮಗಳನ್ನು ಕೈಗೊಳ್ಳಬೇಕೆಂದು ನಿಯಮವಿದೆ. ಆದರೆ, ಫಕೀರ್ ಕಾಲೋನಿಯ ನಿವಾಸಿಗಳಿಗೆ ಈವರೆಗೆ ಯಾವುದೇ ನೋಟಿಸ್ ನೀಡಲಾಗಿಲ್ಲ. ಅಧಿಕಾರಿಗಳು ಏಕಾಏಕಿ ಕಾಲೋನಿಗೆ ನುಗ್ಗಿ, ಮನೆಗಳ ಮೇಲೆ ಬುಲ್ಡೋಜರ್ ಹತ್ತಿಸಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.
Advertisement