ಮಲೆನಾಡು ಭಾಗದಲ್ಲಿ 'ಮಂಗನ ಕಾಯಿಲೆ': ಶಾಶ್ವತ ಪರಿಹಾರಕ್ಕೆ ಸಂಸದ ಬಿ.ವೈ. ರಾಘವೇಂದ್ರ ಕೇಂದ್ರಕ್ಕೆ ಒತ್ತಾಯ!

ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಜೆ. ಪಿ. ನಡ್ಡಾ ಅವರನ್ನು ರಾಘವೇಂದ್ರ ಭೇಟಿಯಾಗಿದ್ದು, ಸಮಗ್ರ ಚರ್ಚೆ ನಡೆಸಿದ್ದಾರೆ.
MP B.Y. Raghavendra met Union Minister jp nadda
ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾಗೆ ಮನವಿ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ
Updated on

ಶಿವಮೊಗ್ಗ: ಮಲೆನಾಡು ಪ್ರದೇಶದ ರೈತರು, ಅರಣ್ಯವಾಸಿಗಳು ಹಾಗೂ ಗ್ರಾಮೀಣ ಸಮುದಾಯಗಳು ವರ್ಷಗಳಿಂದ ಎದುರಿಸುತ್ತಿರುವ “ಮಂಗನ ಕಾಯಿಲೆ (KFD) ಗೆ ಶಾಶ್ವತ ಮತ್ತು ವೈಜ್ಞಾನಿಕ ಪರಿಹಾರ ದೊರಕಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಜೆ. ಪಿ. ನಡ್ಡಾ ಅವರನ್ನು ರಾಘವೇಂದ್ರ ಭೇಟಿಯಾಗಿದ್ದು, ಸಮಗ್ರ ಚರ್ಚೆ ನಡೆಸಿದ್ದಾರೆ.

ಮಂಗನ ಕಾಯಿಲೆಯಿಂದ ಆಗುತ್ತಿರುವ ಜೀವ ಹಾನಿ ಹಾಗೂ ಜನಜೀವನದ ಮೇಲೆ ಬೀರುವ ಪರಿಣಾಮವನ್ನು ಗಂಭೀರವಾಗಿ ಪರಿಗಣಿಸಿ, ಪರಿಣಾಮಕಾರಿ ಲಸಿಕೆ ಅಭಿವೃದ್ಧಿಗೆ ತ್ವರಿತ ಕ್ರಮ, ICMR ಹಾಗೂ NIV ಮೂಲಕ ಸಂಶೋಧನೆಗೆ ವೇಗ, ಶಿವಮೊಗ್ಗದಲ್ಲಿ NIV ಉಪ-ಕೇಂದ್ರ ಸ್ಥಾಪನೆ ಮತ್ತು ಪ್ರಾದೇಶಿಕ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸುವಿಕೆ ಕುರಿತು ಕೇಂದ್ರ ಸಚಿವರ ಗಮನಕ್ಕೆ ತಂದಿರುವುದಾಗಿ ಅವರು ತಿಳಿಸಿದ್ದಾರೆ.

MP B.Y. Raghavendra met Union Minister jp nadda
ಉತ್ತರ ಕನ್ನಡ ಜಿಲ್ಲೆಯಲ್ಲಿ 108 ಮಂಗನ ಕಾಯಿಲೆ ಪ್ರಕರಣ ಪತ್ತೆ!

ಮಲೆನಾಡಿನ ಜನರು ಇನ್ನು ಮುಂದೆ ಭಯದಲ್ಲಿ ಬದುಕುವ ಪರಿಸ್ಥಿತಿ ಬಾರದಂತೆ, “ಒಂದು ಆರೋಗ್ಯ” (One Health) ದೃಷ್ಟಿಕೋನದ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಶಾಶ್ವತ ಪರಿಹಾರ ದೊರಕಿಸುವಂತೆ ಮನವಿ‌ ಸಲ್ಲಿಸಿರುವುದಾಗಿ ಅವರು ಹೇಳಿದ್ದಾರೆ.

ಮಂಗನ ಕಾಯಿಲೆ ನಿರ್ಮೂಲನೆಗೆ ಅಗತ್ಯವಾದ ವೈಜ್ಞಾನಿಕ ನೆರವು, ಆರ್ಥಿಕ ಬೆಂಬಲ ಹಾಗೂ ಎಲ್ಲಾ ಅಗತ್ಯ ಕ್ರಮಗಳನ್ನು ಅತ್ಯಂತ ಶೀಘ್ರವಾಗಿ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರದಿಂದ ಖಚಿತ ಭರವಸೆ ನೀಡಲಾಗಿದೆ. ಈ ಮಹತ್ವದ ವಿಷಯಕ್ಕೆ ತಕ್ಷಣ ಸ್ಪಂದಿಸಿ, ಪರಿಣಾಮಕಾರಿ ಕ್ರಮಗಳನ್ನು ಜಾರಿಗೊಳಿಸುವುದಾಗಿ ತಿಳಿಸಿರುವುದಾಗಿ ಸಂಸದರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com