ನರೇಗಾ ಹೆಸರು ಬದಲಾವಣೆ: ಕಾಂಗ್ರೆಸ್ ಆರೋಪಕ್ಕೆ ಸಿಟಿ ರವಿ ತಿರುಗೇಟು

ಈ ಬದಲಾವಣೆಯನ್ನು ಕೇಂದ್ರ ಸರ್ಕಾರ ಹಿಂಪಡೆಯುವವರೆಗೂ ಹೋರಾಟ ಮಾಡಿ ಒತ್ತಡ ಹಾಕಲಾಗುವುದು ಎಂದರು. ಕೇಂದ್ರ ಸರ್ಕಾರ ಐತಿಹಾಸಿಕ ಪ್ರಮಾದ ಎಸಗಿದ್ದು, ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹೆಸರಿನಲ್ಲಿದ್ದ ಯೋಜನೆ ಹೆಸರು ಬದಲಿಸಲಾಗಿದೆ.
CT Ravi
ಸಿಟಿ ರವಿ
Updated on

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಹೆಸರಿನಲ್ಲಿ ಗಾಂಧಿ ಹೆಸರು ಕೈಬಿಟ್ಟು, ಯೋಜನೆಯನ್ನೇ ಬದಲಿಸಿದ ಕೇಂದ್ರದ ನಿಲುವನ್ನು ಹೇಗೆ ವಿರೋಧಿಸಬೇಕು ಎಂದು ಇದೇ 27ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಚರ್ಚಿಸಲಾಗುವುದು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಚಿನ್‌ ಪೈಲಟ್ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕೇಂದ್ರದ ಈ ನೀತಿ ವಿರುದ್ಧ ಇಂಡಿಯಾ ಮೈತ್ರಿಕೂಟ ಸೇರಿ ಇಡೀ ಭಾರತ ಒಟ್ಟಾಗಿ ವಿರೋಧ ಮಾಡಬೇಕಿದೆ.

ಈ ಬದಲಾವಣೆಯನ್ನು ಕೇಂದ್ರ ಸರ್ಕಾರ ಹಿಂಪಡೆಯುವವರೆಗೂ ಹೋರಾಟ ಮಾಡಿ ಒತ್ತಡ ಹಾಕಲಾಗುವುದು ಎಂದರು. ಕೇಂದ್ರ ಸರ್ಕಾರ ಐತಿಹಾಸಿಕ ಪ್ರಮಾದ ಎಸಗಿದ್ದು, ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹೆಸರಿನಲ್ಲಿದ್ದ ಯೋಜನೆ ಹೆಸರು ಬದಲಿಸಲಾಗಿದೆ.

ಈ ಯೋಜನೆ ಆರ್ಥಿಕವಾಗಿ ತೀರಾ ಹಿಂದುಳಿದ ಜನರಿಗೆ ಸಾಂವಿಧಾನಿಕವಾಗಿ ಉದ್ಯೋಗ ಖಾತರಿ ಹಕ್ಕು ನೀಡಿತ್ತು. ವರ್ಷಕ್ಕೆ 100 ದಿನಗಳ ಉದ್ಯೋಗ ನೀಡುವ ಖಾತರಿ ಯೋಜನೆಯನ್ನು ಸಂಸತ್ತಿನಲ್ಲಿ ಚರ್ಚೆ ಮಾಡದೆ, ರಾಜ್ಯ ಸರ್ಕಾರಗಳ ಅಭಿಪ್ರಾಯ ಪಡೆಯದೆ, ಸ್ಥಾಯಿ ಸಮಿತಿ ಪರಾಮರ್ಶೆಗೂ ಅವಕಾಶ ನೀಡದೆ ಅಧಿಕಾರ ದುರುಪಯೋಗ ಮಾಡಿಕೊಂಡು ಬದಲಾವಣೆ ಮಾಡಲಾಗಿದೆ ಎಂದು ಪೈಲಟ್ ದೂರಿದ್ದಾರೆ.

CT Ravi
ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಕೇಂದ್ರದಿಂದ ನರೇಗಾ ಯೋಜನೆ ಸಮಾಧಿ; ಡಿ.ಕೆ.ಶಿವಕುಮಾರ್

ಇಷ್ಟು ದಿನಗಳ ಕಾಲ ಯೋಜನೆಯಲ್ಲಿ 90% ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿತ್ತು, ಉಳಿದ 10% ಅನುದಾನವನ್ನು ರಾಜ್ಯ ಸರ್ಕಾರಗಳು ಒದಗಿಸಬೇಕಾಗಿತ್ತು. ಆದರೆ ಈಗ, ಯೋಜನೆಯಲ್ಲಿನ ಅನುದಾನದ ಪಾಲನ್ನು 60:40 ಅನುಪಾತಕ್ಕೆ ಪರಿವರ್ತಿಸಲಾಗಿದೆ. ರಾಜ್ಯ ಸರ್ಕಾರಗಳ ಮೇಲೆ ಹೆಚ್ಚು ಹೊರೆ ಹಾಕುತ್ತಿದೆ. ಮೋದಿ ಅವರಿಗೆ 11 ವರ್ಷಗಳ ಬಳಿಕವೂ ಈ ಯೋಜನೆ ನಿಲ್ಲಿಸಲು ಸಾಧ್ಯವಾಗಿಲ್ಲ.

100 ದಿನಗಳ ಬದಲು 125 ದಿನ ಮಾಡಲಾಗುತ್ತಿದೆ ಎಂದು ಹೇಳಿ ಯೋಜನೆಗೆ ಚ್ಯುತಿ ತರಲಾಗುತ್ತಿದೆ. ಬಿಹಾರದಲ್ಲಿ ನರೇಗಾ ಯೋಜನೆ ಮೇಲೆ ಹೆಚ್ಚು ಅವಲಂಬಿತರಾಗಿದ್ದರು. ಹೀಗಾಗಿಯೇ ಬಿಹಾರ ಚುನಾವಣೆ ಬಳಿಕ ಯೋಜನೆಯಲ್ಲಿ ಬದಲಾವಣೆ ತರಲಾಗಿದೆ ಎಂದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್‌ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಯಾವುದೇ ವ್ಯವಹಾರ ನಡೆಸಿಲ್ಲವಾದರೂ ಅವರನ್ನು ಆರೋಪದಲ್ಲಿ ಸಿಲುಕಿಸುವ ಷಡ್ಯಂತ್ರ ನಡೆಸಲಾಗಿತ್ತು. ಕೋರ್ಟ್ ಈ ಪ್ರಕರಣವನ್ನು ವಜಾಗೊಳಿಸುವ ಮೂಲಕ ಕೇಂದ್ರದ ದ್ವೇಷ ರಾಜಕಾರಣಕ್ಕೆ ಶಾಸ್ತಿ ಮಾಡಿದೆ ಎಂದು ಸಚಿನ್‌ ಪೈಲಟ್ ಹೇಳಿದ್ದಾರೆ.

ಇ.ಡಿ. ದಾಖಲಿಸಿರುವ ಪ್ರಕರಣ ರಾಜಕೀಯ ಪ್ರೇರಿತವಾಗಿರುವ ಕಾರಣ ನ್ಯಾಯಾಲಯ ಪ್ರಕರಣವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ವಿರೋಧ ಪಕ್ಷಗಳ ಧ್ವನಿ ಅಡಗಿಸುವ ಪ್ರಯತ್ನವನ್ನು ಇ.ಡಿ.ಯಂಥ ಸಂಸ್ಥೆಗಳ ಮೂಲಕ ಕೇಂದ್ರ ಮಾಡುತ್ತಿದೆ ಎಂದು ಕಿಡಿಕಾರಿದರು.

CT Ravi
ನರೇಗಾ ಬದಲು VB-G RAM G ಮಸೂದೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ

ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವ ಮೂಲಕ ಕೇಂದ್ರ ಸರ್ಕಾರ ನರೇಗಾ ಯೋಜನೆ ಸಮಾಧಿಗೆ ಹೊರಟಿದೆ. ಇದು ಕೇಂದ್ರ ಬಿಜೆಪಿ ಸರ್ಕಾರದ ಕೊನೆಯ ದಿನಗಳ ಆರಂಭ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ‘ಈ ಯೋಜನೆಯ ಕುರಿತು ಚರ್ಚಿಸಲು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ದೆಹಲಿಯಲ್ಲಿ ಮಂಗಳವಾರ (ಡಿ. 23) ಸಭೆ ಕರೆದಿದ್ದಾರೆ.

ಕೇಂದ್ರ ಸರ್ಕಾರ ಹೇಳಿದ ಅನುಪಾತದಲ್ಲಿ ಯಾವ ರಾಜ್ಯ ಸರ್ಕಾರವೂ ಹಣ ನೀಡಲು ಸಾಧ್ಯವಿಲ್ಲ. ಈ ರೀತಿಯಾದರೆ ಕಾರ್ಯಕ್ರಮ ಸತ್ತು ಹೋದಂತೆ’ ಎಂದರು. ‘ಕೇಂದ್ರದ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ಈ ತೀರ್ಮಾನವನ್ನು ವಿರೋಧಿಸಿ ಸರ್ಕಾರ ಮತ್ತು ಪಕ್ಷ ಒಟ್ಟಾಗಿ ಹೋರಾಟ ಮಾಡುತ್ತೇವೆ’ ಎಂದರು.

ಹೊಸ ಕಾಯ್ದೆಯು ಖಾತರಿಪಡಿಸಿದ ಉದ್ಯೋಗವನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸುತ್ತದೆ. ಇದು ಗ್ರಾಮೀಣ ಕಾರ್ಮಿಕರಿಗೆ ಮತ್ತಷ್ಟು ಸಹಾಯವನ್ನು ನೀಡುತ್ತದೆ ಮತ್ತು ಕೃಷಿಗೆ ಪ್ರಯೋಜನವನ್ನು ನೀಡುತ್ತದೆ, ಗ್ರಾಮೀಣ ಉದ್ಯೋಗ ನೀತಿಯಲ್ಲಿ ಒಂದು ಪರಿವರ್ತನಾ ಮೈಲಿಗಲ್ಲು ಎಂದು ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಶ್ಲಾಘಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com