ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಕೇಂದ್ರದಿಂದ ನರೇಗಾ ಯೋಜನೆ ಸಮಾಧಿ; ಡಿ.ಕೆ.ಶಿವಕುಮಾರ್

ಸೋನಿಯಾಗಾಂಧಿ ಅವರು ಹಾಗೂ ರಾಹುಲ್ ಗಾಂಧಿ ಅವರಿಗೂ ಇದೇ ರೀತಿ ಮಾಡಲು ಹೊರಟರು ಆದರೆ ಧೈರ್ಯ ಸಾಲದೆ ಚಾರ್ಜ್ ಶೀಟ್ ಹಾಕಿದರು. ನ್ಯಾಯಾಲಯ ಇದನ್ನು ತಿರಸ್ಕರಿಸಿತು.
DK shivkumar
ಡಿ.ಕೆ. ಶಿವಕುಮಾರ್
Updated on

ಬೆಂಗಳೂರು: ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ ಎಂದು ಡಿಸಿಎಂ‌ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು.‌ ಆರ್ಟಿಕಲ್ 21 ರ ಮೂಲಕ ಸಾಂವಿಧಾನಿಕವಾಗಿ ಕಾಂಗ್ರೆಸ್ ಪಕ್ಷ ನೀಡಿದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಕಾರ್ಯಕ್ರಮವನ್ನು ಬಿಜೆಪಿ ಮುಟ್ಟುವ ಧೈರ್ಯ ಮಾಡುತ್ತದೆ ಎಂದುಕೊಂಡಿರಲಿಲ್ಲ. ಆದರೆ ಈಗ ಮನರೇಗಾ ಹೆಸರನ್ನು ಬದಲಾವಣೆ ಮಾಡಲು ಹೊರಟಿರುವುದು ನೋಡಿದರೆ ಬಿಜೆಪಿಯ ಅಂತ್ಯ ಪ್ರಾರಂಭವಾಗಿದೆ ಎಂದು ನನಗೆ ಅನಿಸುತ್ತಿದೆ ಎಂದರು.

"ಬಡವರಿಗೆ ಕೊಟ್ಟ ಕಾರ್ಯಕ್ರಮದ ಕುತ್ತಿಗೆ ಹಿಸುಕುವ ಕೆಲಸ ಮಾಡಲಾಗುತ್ತಿದೆ. ದೇಶದ ಬಡಜನತೆಗೆ ಎಸಗುತ್ತಿರುವ ದ್ರೋಹವಿದು. ಇದಕ್ಕಿಂತ ದೊಡ್ಡ ಅವಮಾನವಿಲ್ಲ" ಎಂದು ಕಿಡಿಕಾರಿದರು. ಮುಂಬರುವ 27 ರಂದು ಪಕ್ಷದ ಕಾರ್ಯಕಾರಿಣಿ‌ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಹೆಸರು ಬದಲಾವಣೆ ಹಿಂಪಡೆಯುವ ತನಕ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಹೋರಾಟ ರೂಪಿಸಲಾಗುವುದು" ಎಂದರು.

ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ದೆಹಲಿಯಲ್ಲಿ ಮಂಗಳವಾರ ಸಭೆ ಕರೆದಿದ್ದಾರೆ. ಇಲ್ಲಿ ಇದರ ಬಗ್ಗೆ ಚರ್ಚೆ ನಡೆಸಲಾಗುವುದು. ಕೇಂದ್ರ ಸರ್ಕಾರ ಹೇಳಿದ ಅನುಪಾತದಲ್ಲಿ ಯಾವ ರಾಜ್ಯ ಸರ್ಕಾರವೂ ಹಣ ನೀಡಲು ಸಾಧ್ಯವಿಲ್ಲ. ಈ ರೀತಿ ಆದರೆ ಕಾರ್ಯಕ್ರಮ ಸತ್ತು ಹೋದಂತೆ. ಇದನ್ನು ಸಮಾಧಿ ಮಾಡಲಾಗಿದೆ. ಕೊಲೆ ಮಾಡಲಾಗಿದೆ" ಎಂದರು. ಸರ್ಕಾರ ಮತ್ತು ಪಕ್ಷ ಒಟ್ಟಾಗಿ ನರೇಗಾ ಯೋಜನೆಯ ವಿರುದ್ದ ಕೇಂದ್ರ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ತೀರ್ಮಾನ ವಿರೋಧಿಸಿ ಹೋರಾಟ ಮಾಡುತ್ತೇವೆ. ಇದು ರಾಷ್ಟ್ರೀಯ ವಿಚಾರ. ಈ ದೇಶದ ಗ್ರಾಮ ಪಂಚಾಯತಿಗಳನ್ನು ಸುಭದ್ರಗೊಳಿಸಿದ್ದು ಕಾಂಗ್ರೆಸ್ ಸರ್ಕಾರ. ರಾಜೀವ್ ಗಾಂಧಿ ಅವರು ತಂದ 73,74 ನೇ ತಿದ್ದುಪಡಿ ಮೂಲಕ ಅಧಿಕಾರ ವಿಕೇಂದ್ರೀಕರಣ ಮಾಡಿದರು" ಎಂದರು.

DK shivkumar
2027 ಡಿಸೆಂಬರ್ ವೇಳೆಗೆ 175 ಕಿ.ಮೀ ಮೆಟ್ರೋ ಸಂಚಾರ: 3ನೇ ಹಂತದ ಯೋಜನೆಗೆ ಜನವರಿಯಲ್ಲಿ ಟೆಂಡರ್; ಡಿ.ಕೆ ಶಿವಕುಮಾರ್

"ಪಂಚಾಯತಿಗೆ, ಮತದಾರರಿಗೆ, ಉದ್ಯೋಗ ಖಾತ್ರಿ ಯೋಜನೆ ಫಲಾನುಭವಿಗಳಿಗೆ ನೀಡಿರುವ ಹಕ್ಕನ್ನು ಕಾಂಗ್ರೆಸ್ ಪಕ್ಷ ಕಾಪಾಡಲಿದೆ. ಕಾಪಾಡಲು ಹೋರಾಟ ರೂಪಿಸಲಿದೆ. ಇದರ ಬಗ್ಗೆ ರಾಜ್ಯದ ಎಲ್ಲಾ ಗ್ರಾಮಪಂಚಾಯತಿಗಳ ಮುಖಂಡರನ್ನು ಪಕ್ಷಾತೀತವಾಗಿ ಕರೆದು ಅವರ ಬಳಿ ಚರ್ಚೆ ನಡೆಸಲಾಗುವುದು. ಇದರ ಬಗ್ಗೆ ದೊಡ್ಡ ಆಂದೋಲನ ರೂಪಿಸಿ ಜನಾಭಿಪ್ರಾಯ ರೂಪಿಸಲಾಗುವುದು" ಎಂದು ತಿಳಿಸಿದರು.

"ಇದರ ವಿರುದ್ಧ ಜನಾಭಿಪ್ರಾಯ ರೂಪಿಸಲಾಗುವುದು. ಅನ್ಯಾಯದ ಬಗ್ಗೆ ತಿಳಿಸಲಾಗುವುದು. ಹೆಸರು ಬದಲಾವಣೆ ತೀರ್ಮಾನವನ್ನು ವಾಪಸ್ ಪಡೆಯುವ ತನಕ ಹೋರಾಟ ನಡೆಸಲಾಗುವುದು. ಕಾಂಗ್ರೆಸ್ ಪಕ್ಷ ದೇಶದ ಜನಸಾಮಾನ್ಯರ ಪರವಾಗಿ ನಿಲ್ಲಲಿದೆ. ಜನರ ಹಕ್ಕನ್ನು ಕಾಪಾಡುವುದು ನಮ್ಮ ಕರ್ತವ್ಯ. ಚುನಾವಣೆಗಳು ಬರುತ್ತವೆ ಹೋಗುತ್ತವೆ. ಸೋಲು, ಗೆಲುವು ಇದ್ದಿದ್ದೆ" ಎಂದರು.

"ಇಡೀ ಭಾರತದಲ್ಲಿಯೇ ನನ್ನ ಕನಕಪುರ ಕ್ಷೇತ್ರ ಅತಿ ಹೆಚ್ಚು ನರೇಗಾ ಕಾಮಗಾರಿಗಳನ್ನು ನಡೆಸಿದ ಕ್ಷೇತ್ರ. ಇಲ್ಲಿ ಅವ್ಯವಹಾರ ನಡೆದಿದೆ ಎಂದು ಕೇಂದ್ರ ಬಿಜೆಪಿ ಸರ್ಕಾರ ತನಿಖಾ ತಂಡವನ್ನು ಕಳುಹಿಸಿತು. ಹತ್ತಾರು ನಿಯೋಗ ಬಂದಿತು. 250-300 ಕೋಟಿ ರೂಪಾಯಿ ಕೆಲಸವನ್ನು ನರೇಗಾ ಮೂಲಕ ಮಾಡಲಾಗಿತ್ತು. 50 ಸಾವಿರ ದನದ ಕೊಟ್ಟಿಗೆಗಳನ್ನು ಕಟ್ಟಲಾಗಿತ್ತು. ಶಾಲಾ ಕಟ್ಟಡ, ಜಮೀನು ಮಟ್ಟ ಮಾಡುವುದು, ಕೃಷಿ ಹೊಂಡ ನಿರ್ಮಾಣ, ನೂರಾರು ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡಲಾಯಿತು. ಇಲ್ಲಿನ‌ ಕೆಲಸಗಳನ್ನು ನೋಡಿ ನನಗೆ ಎಲ್ಲಿ ಪ್ರಶಸ್ತಿ ನೀಡಬೇಕಾಗುತ್ತದೋ ಎಂದು ಕ್ಷೇತ್ರದ ತಾಲ್ಲೂಕು ಪಂಚಾಯತಿ ಅಧ್ಯಕ್ಷರಿಗೆ ಪ್ರಶಸ್ತಿ ನೀಡಿದರು" ಎಂದರು.

"ಪ್ರತಿಯೊಂದು ಪಂಚಾಯತಿಯಲ್ಲಿಯೂ ಯಾವ ಕಾಮಗಾರಿಗಳನ್ನು ತೆಗೆದುಕೊಳ್ಳಬೇಕು ಎಂದು ಚರ್ಚೆ ನಡೆಸಿ ಕೈಗೆತ್ತಿಕೊಳ್ಳಲಾಗುತ್ತಿತ್ತು. ಪ್ರತಿದಿನ ಎನ್ ರೋಲ್ ಮೆಂಟ್ ಇರುತ್ತಿತ್ತು. ಎಷ್ಟು ಮಾನವದಿನ ಕೆಲಸ ನೀಡಬಹುದು ಎಂದು ಯೋಜಿಸಲಾಗುತ್ತಿತ್ತು. ಈಗಿನ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಕೂಲಿ ಹಣವನ್ನೇ ನೀಡುತ್ತಿಲ್ಲ" ಎಂದರು.

DK shivkumar
ಡಿ.ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ: ರಾಜಣ್ಣ

ಕೇಂದ್ರ ಸರ್ಕಾರ ಕೊಲೆ ಮಾಡಲು ಹೊರಟಿದೆ

"ಈ ಮೊದಲು ಕೇಂದ್ರ ‌ಹಾಗೂ ರಾಜ್ಯ ಸರ್ಕಾರ ಕ್ರಮವಾಗಿ ಶೇ 90:10 ಅನುಪಾತದಲ್ಲಿ ಅನುದಾನ ನೀಡಬೇಕಿತ್ತು. ಈಗ ಶೇ 60:40 ಅನುಪಾತ ತಂದು ಈ ಯೋಜನೆಯನ್ನು ಸಾಯಿಸಲಾಗುತ್ತಿದೆ. ಮಹಾತ್ಮಾ ಗಾಂಧಿ ಅವರ ಹೆಸರಿ‌ನಲ್ಲಿರುವ ಯೋಜನೆಯನ್ನು ಕೊಲೆ ಮಾಡಲು ಬಿಜೆಪಿ ಸರ್ಕಾರ ಹೊರಟಿದೆ. ದೇಶದ ಎಲ್ಲಾ ಪ್ರಜಾ ಪ್ರತಿನಿಧಿಗಳಿಗೆ ಶಾಕಿಂಗ್ ವಿಚಾರ" ಎಂದರು.

"ಬಳ್ಳಾರಿ ಪಾದಯಾತ್ರೆ ಸಮಯದಲ್ಲಿ ಒಂದು ಕಡೆ ಮಹಿಳೆಯರು ಒಂದಷ್ಟು ವಿಚಾರಗಳನ್ನು ಈ ಯೋಜನೆ ಬಗ್ಗೆ ಹೇಳಿದರು. ಆಗ ಸಿ.ಪಿ.ಜೋಶಿ ಸಚಿವರಿದ್ದರು. ಆ ಮಹಿಳೆಯರು ತಿಳಿಸಿದ ವಿಚಾರಗಳನ್ನು ತಿಳಿಸಿ ಬೇರೆಯವರ ಜಮೀನಿನಲ್ಲಿ ಒಂದಷ್ಟು ಜನರಿಗೆ ಕೆಲಸ ಮಾಡಲು ನಾಚಿಕೆ‌ ಇರುತ್ತದೆ ಎಂದು ಸೋನಿಯಾ ಗಾಂಧಿ ಅವರಿಗೆ ಇದರ ಬಗ್ಗೆ ತಿಳಿಸಿದೆ. ಅವರು ಸಚಿವರಿಗೆ ಗಮನಿಸಲು ಸೂಚಿಸಿದರು. ಆ ನಂತರ ಸ್ವಂತ ಜಮೀನಿನಲ್ಲಿ ಈ ಯೋಜನೆ ಅಡಿ ಕೆಲಸ ಮಾಡಬಹುದು ಎಂದು ತಿದ್ದುಪಡಿ ಮಾಡಲಾಯಿತು" ಎಂದರು.

"ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಯಾವುದೇ ಎಫ್ ಐಆರ್ ಇಲ್ಲದೇ ಇ.ಡಿ ಈ ಪ್ರಕರಣವನ್ನು ಹೇಗೆ ಕೈಗೆತ್ತಿಕೊಂಡಿತು. ನಮ್ಮ ಮೇಲೂ ಇ.ಡಿ‌ ಬೇಕಾದಷ್ಟು ‌ಪ್ರಕರಣಗಳನ್ನು ದಾಖಲಿಸಿತ್ತು.‌ ಕೊನೆಗೆ ಏನಾಯಿತು? ಜೈಲಿನಲ್ಲಿ ಇಟ್ಟರು. ತುಘಲಕ್ ಪೊಲೀಸ್ ಠಾಣೆಯಲ್ಲಿ ಇಟ್ಟರು" ಎಂದರು.

"ಸೋನಿಯಾಗಾಂಧಿ ಅವರು ಹಾಗೂ ರಾಹುಲ್ ಗಾಂಧಿ ಅವರಿಗೂ ಇದೇ ರೀತಿ ಮಾಡಲು ಹೊರಟರು ಆದರೆ ಧೈರ್ಯ ಸಾಲದೆ ಚಾರ್ಜ್ ಶೀಟ್ ಹಾಕಿದರು. ನ್ಯಾಯಾಲಯ ಇದನ್ನು ತಿರಸ್ಕರಿಸಿತು. ನ್ಯಾಯಾಲಯವು ಪೊಲೀಸರ ಬಳಿ ಚಾರ್ಜ್ ಶೀಟ್ ಎಲ್ಲಿ, ಎಫ್ ಐಆರ್ ಎಲ್ಲಿ ಎಂದು ಕೇಳಿತು. ನಮ್ಮ ವಕೀಲರಾದ ಅಭಿಷೇಕ್ ಮನುಸಿಂಗ್ವಿ ಅವರು ವಾದ ಮಾಡಿದರು. ಇವರು ಕಾನೂನುಗಳನ್ನು ಪರಿಶೀಲಿಸಿದಾಗ, ಯಾವುದೇ ವ್ಯಕ್ತಿ ದೂರು ನೀಡಿದರೆ ಪ್ರಕರಣದಾಖಲಿಸಲು ಬರುವುದಿಲ್ಲ. ಯಾವುದಾದರೂ ಸಂಸ್ಥೆ ಮುಖಾಂತರ ದೂರು ನೀಡಬೇಕು" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com