Techie Shoots Banker Wife Dead in Bengaluru
ಶೂಟೌಟ್ ನಡೆದ ಸ್ಥಳ

ಬೆಂಗಳೂರಿನಲ್ಲಿ ಶೂಟೌಟ್: ಕೋರ್ಟ್​​​ನಿಂದ ಆಚೆ ಬಂದ ಬ್ಯಾಂಕರ್ ಪತ್ನಿಗೆ ಗುಂಡಿಕ್ಕಿ ಕೊಂದ ಟೆಕ್ಕಿ!

ಇಂದು ಸಂಜೆ ಬಾಲಮುರುಗನ್‌ ಎಂಬ ವ್ಯಕ್ತಿ ತನ್ನ ಪತ್ನಿ ಭುವನೇಶ್ವರಿ ಮೇಲೆ ಗುಂಡು ಹಾರಿಸಿದ್ದು, ಗುಂಡೇಟಿನಿಂದ ಗಂಭೀರ ಗಾಯಗೊಂಡಿದ್ದ ಪತ್ನಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
Published on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಗಂಡ - ಹೆಂಡತಿ ಜಗಳ ಸಾವಿನಲ್ಲಿ ಅಂತ್ಯವಾಗಿದ್ದು, ಬ್ಯಾಂಕರ್ ಪತ್ನಿ ಜತೆ ಜಗಳ ಮಾಡಿದ ಟೆಕ್ಕಿ ಪತಿ ಏಕಾಏಕಿ ಗನ್‌ ತೆಗೆದು ಗುಂಡಿನ ದಾಳಿ ನಡೆಸಿರುವ ಘಟನೆ ಬಸವೇಶ್ವರ ನಗರದ ವೆಸ್ಟಿನ್ ಹೋಟೆಲ್‌ ಬಳಿ ನಡೆದಿದೆ.

ಇಂದು ಸಂಜೆ ಬಾಲಮುರುಗನ್‌ ಎಂಬ ವ್ಯಕ್ತಿ ತನ್ನ ಪತ್ನಿ ಭುವನೇಶ್ವರಿ ಮೇಲೆ ಗುಂಡು ಹಾರಿಸಿದ್ದು, ಗುಂಡೇಟಿನಿಂದ ಗಂಭೀರ ಗಾಯಗೊಂಡಿದ್ದ ಪತ್ನಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

ಬಾಲಮುರುಗನ್ ಅವರಿಂದ ವಿಚ್ಛೇದನ ಕೋರಿ ಭುವನೇಶ್ವರಿ ಅವರು ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಇಂದು ನ್ಯಾಯಾಲಯಕ್ಕೆ ಹಾಜರಾಗಿ ವಾಪಸ್ ಬರುತ್ತಿರುವಾಗಲೇ ಬಾಲಮುರುಗನ್, ನಡುರಸ್ತೆಯಲ್ಲೇ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಈ ಶೂಟೌಟ್​​​ನಿಂದ ಬಸವೇಶ್ವರ ನಗರವೇ ಬೆಚ್ಚಿಬಿದ್ದಿದೆ.

Techie Shoots Banker Wife Dead in Bengaluru
ಬೆಂಗಳೂರು: ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಅಪಹರಿಸಿ 1.5 ಲಕ್ಷ ರೂ ದರೋಡೆ!

ಪತ್ನಿ ಮೇಲೆ ಅನುಮಾನ

ಬಾಲಮುರುಗನ್​ ಹಾಗೂ ಭುವನೇಶ್ವರಿ 2011ರಲ್ಲಿ ಮದುವೆಯಾಗಿದ್ದು, ಬಳಿಕ ತಮಿಳುನಾಡಿನ ಸೇಲಂನಿಂದ ಬಂದು ಬೆಂಗಳೂರಿನ ರಾಜಾಜಿನಗರದಲ್ಲಿ ಎರಡು ಮಕ್ಕಳೊಂದಿಗೆ ನೆಲೆಸಿದ್ದರು.

ಬಾಲಮುರುಗನ್ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಪತ್ನಿ ಭುವನೇಶ್ವರಿ ಬ್ಯಾಂಕ್ ಉದ್ಯೋಗಿ ಆಗಿದ್ದರು. ಆದ್ರೆ ಬಾಲಮುರುಗನ್ ಅವರು ಪತ್ನಿ ಮೇಲೆ ಅನುಮಾನ ಪಡುತ್ತಿದ್ದರು. ಈ ಸಂಬಂಧ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಇದರಿಂದ ಬೇಸತ್ತು ಭುವನೇಶ್ವರಿ, ವಿಚ್ಛೇದನ ಕೇಳಿದ್ದಳು. ಇದಕ್ಕೆ ಮುರುಗನ್ ಒಪ್ಪಿರಲಿಲ್ಲ.

ಕೊನೆಗೆ ಭುವನೇಶ್ವರಿ 2024ರಲ್ಲಿ ಮುರುಗನ್​​ನಿಂದ ದೂರವಾಗಿ ಕೆಪಿ ಅಗ್ರಹಾರಕ್ಕೆ ಶಿಫ್ಟ್ ಆಗಿದ್ದರು. ಬಳಿಕ ಅವರು ಡಿವೋರ್ಸ್‌ ಗಾಗಿ ಕೋರ್ಟ್​​​ಗೆ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಕೋರ್ಟ್​​ ಮುರುಗನ್​​ಗೆ ನೋಟಿಸ್ ನೀಡಿತ್ತು. ಅದರಂತೆ ಮುರುಗನ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇತ್ತ ಭುವನೇಶ್ವರಿ ಸಹ ವಿಚಾರಣೆಗೆ ಹಾಜರಾಗಿದ್ದು, ಎಲ್ಲಾ ವಿಚಾರಣೆ ಮುಗಿಸಿ ಕೋರ್ಟ್​​ನಿಂದ ಇಬ್ಬರು ಆಚೆ ಬಂದಿದ್ದರು.

Techie Shoots Banker Wife Dead in Bengaluru
ಬೆಂಗಳೂರು: ಪತ್ನಿ ಕೊಲೆ ಮಾಡಿ ಅಪಘಾತವೆಂದು ಬಿಂಬಿಸಲು ಹೊರಟಿದ್ದ ವೃದ್ಧ ಪತಿ ಬಂಧನ

ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಜಗಳ ತೀವ್ರ ಸ್ವರೂಪಕ್ಕೆ ಹೋಗಿ, ಆಕ್ರೋಶಗೊಂಡ ಪತಿ ಮುರುಗನ್, ನಡು ರಸ್ತೆಯಲ್ಲೇ ಗನ್ ತೆಗೆದು ಪತ್ನಿ ಭುವನೇಶ್ವರಿ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಭುವನೇಶ್ವರಿಯನ್ನು ಕೂಡಲೇ ಆಸ್ಪತ್ರೆಗೆ ದಾಖಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಪೊಲೀಸ್ ಠಾಣೆಗೆ ತೆರಳಿ ಶರಣಾದ ಪತಿ

ಹೆಂಡತಿ ಮೇಲೆ ಗುಂಡು ಹಾರಿಸಿದ ಬಳಿಕ ಮುರುಗನ್​ ನೇರವಾಗಿ ಮಾಗಡಿ ರಸ್ತೆ ಪೊಲೀಸ್‌ ಠಾಣೆಗೆ ಹೋಗಿ ಶರಣಾಗಿದ್ದಾನೆ. ಕೂಡಲೇ ಪೊಲಿಸರು, ಶೂಟೌಟ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಅನೈತಿಕ ಸಂಬಂಧ ಅನುಮಾನ ಹಾಗೂ ಡಿವೋರ್ಸ್​​ ಕೇಳಿರುವುದಕ್ಕೆ ಪತ್ನಿಯನ್ನು ಕೊಂದಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com