ವಜ್ರಖಚಿತ ರಾಮನ ವಿಗ್ರಹ
ವಜ್ರಖಚಿತ ರಾಮನ ವಿಗ್ರಹ

ಅಯೋಧ್ಯೆ: ಕರ್ನಾಟಕ ಮೂಲದ ವ್ಯಕ್ತಿಯಿಂದ 30 ಕೋಟಿ ರೂ. ಮೌಲ್ಯದ ವಜ್ರಖಚಿತ ರಾಮನ ವಿಗ್ರಹ ದಾನ

ಕರ್ನಾಟಕ ಮೂಲದ ದಾನಿಯೊಬ್ಬರು ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ 30 ಕೋಟಿ ಮೌಲ್ಯದ ಚಿನ್ನದ ರಾಮನ ಮೂರ್ತಿಯನ್ನು ಕೊಡುಗೆ ನೀಡಿದ್ದಾರೆ. ವಜ್ರ, ಪಚ್ಚೆ ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ ಹಾಗೂ 8 ಅಡಿ ಅಗಲದ ರಾಮನ ಮೂರ್ತಿಯನ್ನು ದಾನ ನೀಡಿದ್ದಾರೆ.
Published on

ಅಯೋಧ್ಯೆ: ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣದಲ್ಲಿ ಭವ್ಯವಾದ ಚಿನ್ನದ ವರ್ಣದ ಪ್ರತಿಮೆಯ ಸ್ಥಾಪನೆಗೆ ಅಯೋಧ್ಯೆ ಸಾಕ್ಷಿಯಾಗಲಿದೆ. ವಜ್ರಗಳು, ಪಚ್ಚೆಗಳು ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ, 8 ಅಡಿ ಅಗಲದ ಪ್ರತಿಮೆಯನ್ನು ಕರ್ನಾಟಕದ ಭಕ್ತರೊಬ್ಬರು ದಾನ ಮಾಡಿದ್ದು ನಿನ್ನೆ ಅಯೋಧ್ಯೆ ತಲುಪಿದೆ.

ಕರ್ನಾಟಕ ಮೂಲದ ದಾನಿಯೊಬ್ಬರು ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ 30 ಕೋಟಿ ಮೌಲ್ಯದ ಚಿನ್ನದ ರಾಮನ ಮೂರ್ತಿಯನ್ನು ಕೊಡುಗೆ ನೀಡಿದ್ದಾರೆ. ವಜ್ರ, ಪಚ್ಚೆ ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ ಹಾಗೂ 8 ಅಡಿ ಅಗಲದ ರಾಮನ ಮೂರ್ತಿಯನ್ನು ದಾನ ನೀಡಿದ್ದಾರೆ.

ಆದರೆ ದಾನ ನೀಡಿದವರ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಕರ್ನಾಟಕ ಮೂಲದ ಅನಾಮಿಕ ಭಕ್ತರೊಬ್ಬರು ನೀಡಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯ ಡಾ. ಅನಿಲ್ ಮಿಶ್ರಾ ಹೇಳಿದ್ದಾರೆ.

ದಕ್ಷಿಣ ಭಾರತದ ಸಾಂಪ್ರದಾಯಿಕ ಶಿಲ್ಪಕಲಾ ಶೈಲಿಯಲ್ಲಿ ರಚಿಸಲಾದ ಈ ಪ್ರತಿಮೆಯ ಮೌಲ್ಯ ಅಂದಾಜು 25-30 ಕೋಟಿ ರೂ. ಎನ್ನಲಾಗಿದೆ. ಸದ್ಯ ಮೂರ್ತಿಯ ತೂಕವನ್ನು ಅಳೆಯಲಾಗುತ್ತಿದ್ದು, ಪ್ರಾಥಮಿಕ ಅಂದಾಜಿನ ಪ್ರಕಾರ ಸುಮಾರು ಐದು ಕ್ವಿಂಟಾಲ್‌ನಷ್ಟಿರಬಹುದು ಎನ್ನಲಾಗಿದೆ. ಸಂಪೂರ್ಣ ವಿವರಗಳನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ವಜ್ರಖಚಿತ ರಾಮನ ವಿಗ್ರಹ
ಅಯೋಧ್ಯೆ ರಾಮಮಂದಿರ: ರಾಮಲಲ್ಲಾ 'ಪ್ರಾಣ ಪ್ರತಿಷ್ಠೆ'ಗೆ ಒಂದು ವರ್ಷ

ತಂಜಾವೂರಿನ ನುರಿತ ಕುಶಲಕರ್ಮಿಗಳು ಮೂರ್ತಿಯ ಕೆತ್ತನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಇದಕ್ಕೆ ಕಲಾತ್ಮಕ ಮತ್ತು ಭವ್ಯವಾದ ನೋಟವನ್ನು ನೀಡಿದ್ದಾರೆ. ವಜ್ರಗಳು, ಪಚ್ಚೆಗಳು, ನೀಲಮಣಿಗಳು ಮತ್ತು ಚಿನ್ನದಿಂದ ಕೂಡಿದ್ದು, ಬಳಸಿದ ನಿಖರವಾದ ಲೋಹವನ್ನು ತಜ್ಞರು ಗುರುತಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದೇ ಡಿಸೆಂಬರ್ 29ರಿಂದ 2026ರ ಜನವರಿ 2ರವರೆಗೆ ಆಚರಿಸಲಾಗುವ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಯ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಷ್ಠಾ ದ್ವಾದಶಿಗೆ ಸಿದ್ಧತೆಗಳು ಪ್ರಾರಂಭವಾಗಿವೆ.

ಸಂತ ತುಳಸಿದಾಸ ದೇವಾಲಯದ ಬಳಿಯ ಅಂಗದ್ ಟೀಲಾದಲ್ಲಿ ಈ ಪ್ರತಿಮೆಯನ್ನು ಸ್ಥಾಪಿಸುವ ಸಾಧ್ಯತೆಯಿದೆ. ಅದಕ್ಕೂ ಮೊದಲು ಮೂರ್ತಿಯನ್ನು ಅನಾವರಣಗೊಳಿಸಲಾಗುವುದು, ನಂತರ ದೇಶಾದ್ಯಂತ ಸಂತರು ಮತ್ತು ಮಹಾಂತರು ಭಾಗವಹಿಸುವ ಪವಿತ್ರೀಕರಣ ಸಮಾರಂಭ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com