ಗರ್ಭಿಣಿ ಮಗಳ ಮರ್ಯಾದಾ ಹತ್ಯೆ: ಮತ್ತೆ ಮೂವರು ಆರೋಪಿಗಳ ಬಂಧನ

ಇದೇ ಗ್ರಾಮದ ದಲಿತ ಯುವಕ ವಿವೇಕಾನಂದ ದೊಡ್ಡಮನಿ ಅವರನ್ನು ಯುವತಿ ವಿವಾಹವಾಗಿದ್ದು, ಇದರಿಂದ ಕುಪಿತಗೊಂಡಿದ್ದ ಆಕೆಯ ತಂದೆ ಪ್ರಕಾಶ್ ಗೌಡ ಮತ್ತು ಅವರ ಇಬ್ಬರು ಸಹೋದರರು ಹೊಡೆದು ಹತ್ಯೆ ಮಾಡಿದ್ದರು.
Dharwad DC Divya Prabhu hands over a cheque for Rs 5 lakh to Hanumantappa Doddamani, father of Vivekanand, at a private hospital in Hubballi on Tuesday.
ಧಾರವಾಡದ ಉಪ ಆಯುಕ್ತೆ ದಿವ್ಯ ಪ್ರಭು ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ವಿವೇಕಾನಂದರ ತಂದೆಗೆ ಚೆಕ್ ಅನ್ನು ಹಸ್ತಾಂತರಿಸಿದರು.
Updated on

ಬೆಂಗಳೂರು: ದಲಿತ ಯುವಕನನ್ನು ಮದುವೆಯಾಗಿ ಗರ್ಭಿಣಿಯಾಗಿದ್ದ ಮಹಿಳೆಯನ್ನು ಆಕೆಯ ಪೋಷಕರೇ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಫಕ್ಕೀರ್‌ಗೌಡ ಪಾಟೀಲ್ (51), ಬಸವನಗೌಡ ಪಾಟೀಲ್ (49) ಮತ್ತು ಗುರುಸಿದ್ದಗೌಡ ಪಾಟೀಲ್ (45) ಎಂದು ಗುರುತಿಸಲಾಗಿದೆ, ಇವರೆಲ್ಲರೂ ಇನಾಂ ವಿರಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ.

ಇದೇ ಗ್ರಾಮದ ದಲಿತ ಯುವಕ ವಿವೇಕಾನಂದ ದೊಡ್ಡಮನಿ ಅವರನ್ನು ಯುವತಿ ವಿವಾಹವಾಗಿದ್ದು, ಇದರಿಂದ ಕುಪಿತಗೊಂಡಿದ್ದ ಆಕೆಯ ತಂದೆ ಪ್ರಕಾಶ್ ಗೌಡ ಮತ್ತು ಅವರ ಇಬ್ಬರು ಸಹೋದರರು ಹೊಡೆದು ಹತ್ಯೆ ಮಾಡಿದ್ದರು. ಘಟನೆಯಲ್ಲಿ ಗಾಯಗೊಂಡ ಯುವತಿಯ ಅತ್ತೆ ಮಾವಂದಿರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವತಿಯ ಅತ್ತೆಯ ಸ್ಥಿತಿ ಇನ್ನೂ ಗಂಭೀರವಾಗಿದೆ.

ಕಾಲ್ ರೆಕಾರ್ಡ್ಸ್ ಮತ್ತು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Dharwad DC Divya Prabhu hands over a cheque for Rs 5 lakh to Hanumantappa Doddamani, father of Vivekanand, at a private hospital in Hubballi on Tuesday.
ಧಾರವಾಡ ಮರ್ಯಾದಾ ಹತ್ಯೆ: 'ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಮಗಳು ಬೇರೆ ಜಾತಿ ಮದುವೆಯಾದ್ರೆ ತಪ್ಪಾ'!

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಪ್ರಸ್ತುತ ಬಂಧನಕ್ಕೊಳಗಾಗಿರುವ ಮೂವರು ಪೆಟ್ರೋಲ್ ಕ್ಯಾನ್ ಹಿಡಿದು ಹೋಗುತ್ತಿರುವುದು ಕಂಡು ಬಂದಿತ್ತು. ಈ ನಿಟ್ಟಿನಲ್ಲಿ ತನಿಖೆ ಪ್ರಗತಿಯಲ್ಲಿದೆ. ದೃಶ್ಯಾವಳಿಗಳನ್ನು ಆಧರಿಸಿ ಅಪರಾಧವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಬೆಂಬಲಿಸಿದ ಎಲ್ಲ ವ್ಯಕ್ತಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ನಡುವೆ ಘಟನೆಗೆ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದಾರೆ.

ಸ್ಥಳದಲ್ಲಿ ಯಾವುದೇ ಅಹಿತಕ ಘಟನೆಗಳು ಸಂಭವಿಸಿದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಏತನ್ಮಧ್ಯೆ, ಜಿಲ್ಲಾಡಳಿತ ಮಂಡಳಿ ಮಂಗಳವಾರ ವಿವೇಕಾನಂದರ ಕುಟುಂಬಕ್ಕೆ 5 ಲಕ್ಷ ರೂ.ಗಳ ಚೆಕ್ ಅನ್ನು ನೀಡಿದೆ.

ಧಾರವಾಡದ ಉಪ ಆಯುಕ್ತೆ ದಿವ್ಯ ಪ್ರಭು ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ವಿವೇಕಾನಂದರ ತಂದೆಗೆ ಚೆಕ್ ಅನ್ನು ಹಸ್ತಾಂತರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com