ಸಿಎಂ ಬದಲಾವಣೆ ವದಂತಿ ನಡುವೆ ಡಿ.ಕೆ ಸುರೇಶ್ 'ಮಾರ್ಮಿಕ ಪೋಸ್ಟ್' ವೈರಲ್!

ಮಾಜಿ ಸಂಸದ ಡಿಕೆ ಸುರೇಶ್ ಮಾಡಿರುವ ಮಾರ್ಮಿಕ್ ಪೋಸ್ಟ್ ಚರ್ಚೆಗೆ ಗ್ರಾಸವಾಗಿದೆ.
DK Suresh
ಡಿಕೆ ಸುರೇಶ್, ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಆಡಳಿತಾರೂಢ ಕಾಂಗ್ರೆಸ್ ನಲ್ಲಿ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಮಾಡಿರುವ ಟ್ವೀಟ್ ರಾಜ್ಯದ ಗಮನ ಸೆಳೆದಿದೆ.

ಬುಧವಾರ ದೆಹಲಿಗೆ ತೆರಳಿದ್ದ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಭೇಟಿಗೆ ಯತ್ನಿಸಿದ್ದಾರೆ. ಆದರೆ ಅದು ಆಗದಿದ್ದಕ್ಕೆ ಬರಿಗೈನಲ್ಲೇ ವಾಪಸ್ ಆಗಿದ್ದಾರೆ. ಇತ್ತ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸಭೆಗೆ ಡಿಕೆಶಿಗೆ ಆಹ್ವಾನ ಬಂದಿಲ್ಲ. ಬದಲಿಗೆ ಸಿಎಂ ಸಿದ್ದರಾಮಯ್ಯಗೆ ಮಾತ್ರ ಆಹ್ವಾನ ನೀಡಲಾಗಿದೆ. ಹೀಗಾಗಿ ಡಿಸೆಂಬರ್ 26 ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಈಗ ಮಾಜಿ ಸಂಸದ ಡಿಕೆ ಸುರೇಶ್ ಮಾಡಿರುವ ಮಾರ್ಮಿಕ್ ಪೋಸ್ಟ್ ಚರ್ಚೆಗೆ ಗ್ರಾಸವಾಗಿದೆ.

DK Suresh
ಡಿಕೆಶಿ-ಖರ್ಗೆ ಭೇಟಿ: ಸಿಎಂ ಬದಲಾವಣೆ ಊಹಾಪೋಹ ಮತ್ತೆ ಮುನ್ನಲೆಗೆ; ಸಿಡಬ್ಲ್ಯುಸಿ ಸಭೆ ಕುರಿತು ಮಹತ್ವದ ಮಾತು! Video

ಗುರಿಯನ್ನು ಬೇಗ ತಲುಪಬೇಕು ಎನ್ನುವವರು ದಾರಿಯಲ್ಲಿ ವಿಶ್ರಮಿಸುತ್ತಾ ಕುಳಿತುಕೊಳ್ಳಬಾರದು ಎಂಬ ಪೋಸ್ಟ್ ಮಾಡಿದ್ದಾರೆ. ಯಾವ ಅರ್ಥದಲ್ಲಿ ಈ ಪೋಸ್ಟ್ ಮಾಡಿದ್ದಾರೆ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com