ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ: CWC ಸಭೆಯಲ್ಲಿ ಭಾಗಿ; ಡಿಕೆಶಿಗೆ ಇಲ್ಲ ಆಹ್ವಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ತೆಲಂಗಾಣದ ರೇವಂತ್‌ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಭಾಗಿಯಾಗಲಿದ್ದಾರೆ. ಕರ್ನಾಟಕದ CWC ಸದಸ್ಯರಾದ ಬಿ.ಕೆ ಹರಿಪ್ರಸಾದ್, ನಾಸೀರ್ ಹುಸೇನ್ ಹಾಗೂ ವೀರಪ್ಪ ಮೊಯ್ಲಿ ಪಾಲ್ಗೊಳ್ಳಲಿದ್ದಾರೆ.
CM Siddaramaiah and DCM D K Shivakumar
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್
Updated on

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳಲಿದ್ದಾರೆ.

ಡಿ.27 ರಂದು ದೆಹಲಿಯ ಇಂದಿರಾ ಭವನದಲ್ಲಿ ಸಿಡಬ್ಲ್ಯೂಸಿ ಸಭೆ ಅಯೋಜನೆಗೊಂಡಿದೆ. ಈ ಸಭೆಯಲ್ಲಿ ಭಾಗಿಯಾಗುವಂತೆ ಕಾಂಗ್ರೆಸ್‌ ಅಧಿಕಾರದಲ್ಲಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ತೆಲಂಗಾಣದ ರೇವಂತ್‌ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಭಾಗಿಯಾಗಲಿದ್ದಾರೆ. ಕರ್ನಾಟಕದ ಸಿಡಬ್ಲ್ಯುಸಿ ಸದಸ್ಯರಾದ ಬಿ.ಕೆ ಹರಿಪ್ರಸಾದ್, ನಾಸೀರ್ ಹುಸೇನ್ ಹಾಗೂ ವೀರಪ್ಪ ಮೊಯ್ಲಿ ಪಾಲ್ಗೊಳ್ಳಲಿದ್ದಾರೆ.

CM Siddaramaiah and DCM D K Shivakumar
ನವದೆಹಲಿ: ಸಿಎಂ ಬದಲಾವಣೆ ವದಂತಿ; 'ಅಡ್ಡ ಗೋಡೆ ಮೇಲೆ ದೀಪ' ಇಟ್ಟಂತೆ ಮಾತನಾಡಿದ DCM ಡಿ.ಕೆ ಶಿವಕುಮಾರ್! Video

ಈ ಮೊದಲು ಸಿಡಬ್ಲ್ಯೂಸಿ ಸಭೆಗೆ ನನಗೆ ಆಹ್ವಾನವಿಲ್ಲ ಎಂದು ಸಿಎಂ ಹೇಳಿದ್ದರು. ಈಗ ನಾಳೆ ಸಿಎಂ ದೆಹಲಿಗೆ ಹೋಗುವುದು ಅಧಿಕೃತವಾಗಿದೆ.

ಐದು ರಾಜ್ಯಗಳ ಚುನಾವಣೆ, ಮತಕಳ್ಳತನ, ನ್ಯಾಷನಲ್ ಹೆರಾಲ್ಡ್ ಮತ್ತು ಮನರೇಗಾ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಡಿಕೆಶಿಗೆ ಇಲ್ಲ ಆಹ್ವಾನ

ನಾಡಿದ್ದಿನ ಸಿಡಬ್ಲ್ಯುಸಿ ಸಭೆಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಆಹ್ವಾನವಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com