ಬೆಂಗಳೂರು: ಮಗಳ ಮದುವೆ ಮಾಡಿಕೊಡಲು ನಿರಾಕರಿಸಿದ ಯುವತಿಯ ತಾಯಿಗೆ ಬೆಂಕಿ ಹಚ್ಚಿದ ಪ್ರೇಮಿ!

ತಮಿಳುನಾಡಿನ ಗೀತಾ, ಮಗಳ ಜತೆ ಸಾಣೆಗುರುವನಹಳ್ಳಿಯಲ್ಲಿ ವಾಸವಿದ್ದು, ಮನೆಯ ಸಮೀಪವೇ ಪ್ರಾವಿಷನ್ ಸ್ಟೋರ್ ಇಟ್ಟುಕೊಂಡಿದ್ದರೆ, ಆರೋಪಿ ಟೀ ಅಂಗಡಿ ಇಟ್ಟುಕೊಂಡಿದ್ದ.
Representational image
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ ಯುವತಿಯ ತಾಯಿಯ ಮೇಲೆ ಯುವಕನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಸಾಣೆಗುರುವನಹಳ್ಳಿಯಲ್ಲಿ ನಡೆದಿದೆ.

ತೀವ್ರ ಸುಟ್ಟ ಗಾಯಗಳಿಂದ ಅಸ್ವಸ್ಥಗೊಂಡಿರುವ ಗೀತಾ (40) ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿ ಮುತ್ತು ತಲೆಮರೆಸಿಕೊಂಡಿರುವುದಾಗಿ ಬಸವೇಶ್ವರನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡಿನ ಗೀತಾ, ಮಗಳ ಜತೆ ಸಾಣೆಗುರುವನಹಳ್ಳಿಯಲ್ಲಿ ವಾಸವಿದ್ದು, ಮನೆಯ ಸಮೀಪವೇ ಪ್ರಾವಿಷನ್ ಸ್ಟೋರ್ ಇಟ್ಟುಕೊಂಡಿದ್ದರೆ, ಆರೋಪಿ ಟೀ ಅಂಗಡಿ ಇಟ್ಟುಕೊಂಡಿದ್ದ. ಮಗಳು ಹಾಗೂ ಮುತ್ತುವಿನ ಪ್ರೀತಿಯ ವಿಚಾರ ತಿಳಿದಿದ್ದ ಅವರು, ಮಗಳನ್ನು ಆತನಿಗೆ ಕೊಟ್ಟು ಮದುವೆ ಮಾಡಲು ಮಾತುಕತೆ ನಡೆಸಿದ್ದರು ಎಂದು ಹೇಳಿದ್ದಾರೆ.

ಆರು ತಿಂಗಳಿನಿಂದ ಗೀತಾ ಅವರ ಮನೆಯಲ್ಲೇ ಆರೋಪಿ ವಾಸವಾಗಿದ್ದ. ಮದ್ಯವ್ಯಸನಿಯಾಗಿದ್ದ ಕಾರಣ ಆತನ ಜತೆ ಮಗಳ ಮದುವೆ ಮಾಡದಿರಲು ಇತ್ತೀಚೆಗೆ ಅವರು ನಿರ್ಧರಿಸಿದ್ದರು. ಈ ಕಾರಣಕ್ಕೆ ಕೋಪಗೊಂಡಿದ್ದ ಮುತ್ತು, ಗೀತಾ ಅವರೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದ.

Representational image
ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಗರ್ಭಿಣಿ ಮಗಳನ್ನೇ ಕೊಂದ ತಂದೆ; ಮೂವರ ಬಂಧನ

ಸೋಮವಾರ ರಾತ್ರಿ ಸಹ ಜಗಳವಾಡಿದ್ದ. ಬಳಿಕ ಗೀತಾ ಅವರು ನಿದ್ದೆಗೆ ಜಾರಿದಾಗ ಆರೋಪಿ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ವೇಳೆ ಮನೆಯಲ್ಲೇ ಇದ್ದ ಗೀತಾ ಅವರ ಮಗಳು ನೆರೆಹೊರೆಯವರ ಸಹಾಯದಿಂದ ಬೆಂಕಿ ನಂದಿಸಿ, ತಾಯಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶೇಕಡ 50ರಷ್ಟು ಸುಟ್ಟ ಗಾಯಗಳಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಆರೋಪಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದು, ಆತನ ಪತ್ತೆಗೆ ಶೋಧ ಮುಂದುವರಿದಿದೆ ಎಂದು ಹೇಳಿದ್ದಾರೆ. ಆರೋಪಿ ವಿರುದ್ಧ ಸೆಕ್ಷನ್ 109 ಬಿಎನ್‌ಎಸ್ ಅಡಿಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com