

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ ಘಟನೆಯಲ್ಲಿ ಖಾಸಗಿ ಬಸ್ ಚಾಲಕ ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.
ಗೊರ್ಲತ್ತು ಗ್ರಾಮದ ಬಳಿ ನಿನ್ನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಖಾಸಗಿ ಬಸ್ ಚಾಲಕ ಮೊಹಮ್ಮದ್ ರಫೀಕ್ (42ವ) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ನಿವಾಸಿಯಾಗಿದ್ದ ರಫೀಕ್ ಅಪಘಾತದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ನಿನ್ನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 7 ಕ್ಕೆ ಏರಿಯಾಗಿದೆ.
Advertisement