

ಚಾಮರಾಜನಗರದ ಗುಂಡ್ಲುಪೇಟೆಯ ಬಂಡೀಪುರದಲ್ಲಿ ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿಯಾಗಿದ್ದಾರೆ. ಕಳೆದ ಎಂಟು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದ ಸಣ್ಣ ಹೈದ ಹುಲಿ ದಾಳಿಗೆ ಮೃತಪಟ್ಟಿದ್ದಾರೆ. ಬಂಡೀಪುರ ಮರಳಳ್ಳ ಕ್ಯಾಂಪ್ ಬಳಿ ಗಸ್ತು ತಿರುಗುತ್ತಿದ್ದ ವೇಳೆ ಸಣ್ಣ ಹೈದ ಮೇಲೆ ಹುಲಿ ದಾಳಿ ನಡೆಸಿದ್ದು ಸ್ಥಳದಲ್ಲೇ ವಾಚರ್ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಗುಂಡ್ಲುಪೇಟೆ ತಾಲೂಕಿನ ದೇಪಾಪುರ ಗ್ರಾಮದಲ್ಲಿ ಬೃಹತ್ ಹುಲಿಯೊಂದು ಅರಣ್ಯ ಇಲಾಖೆ ಇರಿಸಿದ್ದ ಕೇಜ್ನಲ್ಲಿ ಲಾಕ್ ಆಗಿತ್ತು.
Advertisement