

ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀಬ್ರಹ್ಮಬೈದರ್ಕಳ ಗರಡಿ ನೇಮೋತ್ಸವದ ಸಂದರ್ಭದಲ್ಲಿ ವೃದ್ಧೆಯೊಬ್ಬರ ಚಿನ್ನದ ಸರವನ್ನು ಲಪಟಾಯಿಸಿದ ಮೂವರು ಕಳ್ಳಿಯರನ್ನು ಬಂಧಿಸಲಾಗಿದೆ.
ಬಂಧಿತರನ್ನು ತಮಿಳುನಾಡಿನ ಶೀಥಲ್, ಕಾಳಿಯಮ್ಮ, ಮಾರಿ ಎಂದು ಗುರುತಿಸಲಾಗಿದೆ. ಹೆಜಮಾಡಿ ಗರಡಿಯಲ್ಲಿ ಶ್ರೀಬ್ರಹ್ಮಬೈದರ್ಕಳ ಗರಡಿ ನೇಮೋತ್ಸವದ ಸಂದರ್ಭದಲ್ಲಿ ಈ ಮೂವರು ಕಳ್ಳಿಯರು ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಕದ್ದಿದ್ದರು. ಇದು ಸಿಸಿಟಿವಿಯಲ್ಲಿ ಸೆರೆಯಾಗಿ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಹೆಜಮಾಡಿ ನಿವಾಸಿ ಕಮಲ ಎಂಬುವವರ ಕುತ್ತಿಗೆಯಲ್ಲಿದ್ದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಸರವನ್ನು ಪೂಜೆಯ ಸಂದರ್ಭದಲ್ಲಿ ಮೂವರು ಕಳ್ಳಿಯರು ಗಂಟೆ ಹೊಡೆಯುವ ನೆಪದಲ್ಲಿ ಕದ್ದಿದ್ದಾರೆ. ಸಿಸಿಟಿವಿಯಲ್ಲಿ ಮೂವರ ಕರಾಮತ್ತು ಸೆರೆಯಾಗಿತ್ತು.
ವ್ಯಾಪಕ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಪುತ್ತೂರಿನಲ್ಲಿ ಬಂಧಿಸಿದ್ದಾರೆ. ಇವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು, ಹೆಚ್ಟಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
Advertisement