ಬೆಂಗಳೂರು: ಕೋಗಿಲು ಬಳಿ ಒತ್ತುವರಿ ತೆರವು, ಕಾಂಗ್ರೆಸ್‌ನಲ್ಲೇ ಅಸಮಾಧಾನ! ಸಿದ್ದರಾಮಯ್ಯಗೆ ಹೈಕಮಾಂಡ್ ನೀಡಿದ ಸಲಹೆ ಏನು?

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಮಾತನಾಡಿದ್ದಾರೆ.
KC Venugopal and cm siddaramaiah
ಕೆ.ಸಿ. ವೇಣುಗೋಪಾಲ್, ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ ಕಾಂಗ್ರೆಸ್ ಹೈಕಮಾಂಡ್ ಮಧ್ಯ ಪ್ರವೇಶಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಮಾತನಾಡಿದ್ದಾರೆ.

ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿರುವ ರೀತಿ ಬಗ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ತೀವ್ರ ಕಳವಳ ವ್ಯಕ್ತಪಡಿಸಿದೆ. ಅಂತಹ ಕ್ರಮಗಳಿಗೆ ಹೆಚ್ಚಿನ ಎಚ್ಚರಿಕೆ, ಸೂಕ್ಷ್ಮತೆ ಮತ್ತು ಸಹಾನುಭೂತಿ ಅಗತ್ಯವೆಂದು ತಿಳಿಸಿರುವುದಾಗಿ ವೇಣುಗೋಪಾಲ್ ಹೇಳಿದ್ದಾರೆ.

KC Venugopal and cm siddaramaiah
Kogilu layout Demolition: ಅಕ್ರಮ ತೆರವು ಮಾಡಿಲ್ಲ, ವಲಸಿಗರಾದ್ರೂ ಮುಸ್ಲಿಂ ಕುಟುಂಬಗಳಿಗೆ ಬೇರೆಡೆ ಜಾಗ ಕೋಡ್ತೀವಿ- ಸಿದ್ದರಾಮಯ್ಯ

ಸಂತ್ರಸ್ತ ಕುಟುಂಬಗಳಿಗೆ ಪುನರ್ವಸತಿ ಮತ್ತು ಪರಿಹಾರವನ್ನು ಖಚಿತಪಡಿಸಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭರವಸೆ ನೀಡಿರುವುದಾಗಿ ವೇಣುಗೋಪಾಲ್ ತಿಳಿಸಿದ್ದಾರೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮತ್ತು ಸ್ಥಳೀಯ ನಿವಾಸಿಗಳ ಪ್ರತಿಭಟನೆಯ ನಡುವೆ ಸರ್ಕಾರದಿಂದ ಈ ಭರವಸೆ ನೀಡಲಾಗಿದೆ.

ಸರ್ಕಾರವು ದುರ್ಬಲ ಕುಟುಂಬಗಳನ್ನು ಬೇರೆ ವ್ಯವಸ್ಥೆ ಮಾಡದೆ ಸ್ಥಳಾಂತರಿಸುತ್ತಿದೆ. ನಿರಾಶ್ರಿತರಿಗೆ ತಕ್ಷಣ ಪುನರ್ವಸತಿ, ವಸತಿ ಮತ್ತು ಮೂಲಭೂತ ಅಗತ್ಯಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com