

ಕಲಬುರಗಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು ಖಂಡುರಾಜ್ ಧವಲಾಜಿ (42) ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಶಿವಶಕ್ತಿ ನಗರದಲ್ಲಿ ಈ ಘಟನೆ ನಡೆದಿದ್ದು, ಇದುವರೆಗೆ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕೌಟುಂಬಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪತಿ-ಪತ್ನಿಯ ನಡುವಿನ ಜಗಳವೇ ಈ ಕೃತ್ಯಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚೌಕ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
Advertisement