

ತುಮಕೂರು: ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ಮಹಿಳೆಯೊಬ್ಬರು, 8 ವರ್ಷದ ತನ್ನ ಮಗನ ಜೊತೆಗೆ ಕಳ್ಳಂಬೆಳ್ಳ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸೋಮವಾರ ನಡೆದಿದೆ.
ಮೃತರನ್ನು ತುಮಕೂರು ತಾಲೂಕಿನ ಸೋರೆಕುಂಟೆ ಗ್ರಾಮದ ತಾಯಿ ಹಂಸಲೇಖ(36) ಮತ್ತು ಪುತ್ರ ಗುರುಪ್ರಸಾದ್(8) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಕಳ್ಳಂಬೆಳ್ಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕೆರೆಯಿಂದ ತಾಯಿ, ಮಗನ ಮೃತದೇಹವನ್ನು ಹೊರತೆಗೆದಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಇಬ್ಬರ ಶವಗಳು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.
ಭೂಪಸಂದ್ರ ಗ್ರಾಮದ ನಾಗೇಶ್ ಜೊತೆಗೆ ಹಂಸಲೇಖರ ಮದುವೆಯಾಗಿತ್ತು. ಅನಾರೋಗ್ಯದಿಂದ ಹಂಸಲೇಖ ಪತಿ ನಾಗೇಶ್ ಮೃತಪಟ್ಟಿದ್ದರು. ದಂಪತಿಗೆ ಇಬ್ಬರು ಗಂಡು ಮಕ್ಕಳು ಇದ್ದಾರೆ. 3 ವರ್ಷದ ಹಿಂದೆ ನಾಗೇಶ್ ಸಹೋದರ ಲೋಕೇಶ್ ಜತೆ ಹಂಸಲೇಖಳಿಗೆ ಮದುವೆ ಮಾಡಿ ಕೊಡಲಾಗಿತ್ತು. ಆದರೆ ಏಕಾಏಕಾ ಇಂದು ಬೆಳಗ್ಗೆ ಕೆರೆಯಲ್ಲಿ ಮಗನ ಜೊತೆಗೆ ತಾಯಿಯ ಶವ ಪತ್ತೆ ಆಗಿದೆ.
Advertisement