

ಬೆಂಗಳೂರು: ಬಯೋಕಾನ್ ಕಂಪನಿಯ ಉದ್ಯೋಗಿಯೊಬ್ಬರು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.
ಇಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಎರಡನೇ ಹಂತದಲ್ಲಿರುವ ಬಯೋಕಾನ್ ಕಂಪನಿಯ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಉದ್ಯೋಗಿ ಅನಂತ ಭಟ್(35) ಸಾವಿಗೆ ಶರಣಾಗಿದ್ದಾರೆ.
ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅನಂತ ಭಟ್ ಅವರು ಬಯೋಕಾನ್ ಕಂಪನಿಯಲ್ಲಿ ಟೆಕ್ಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಮಧ್ಯಾಹ್ನದ ವೇಳೆಗೆ ಕಂಪನಿಯ ಕೆಫೆಟೇರಿಯಾ ಭಾಗದ ಬಾಲ್ಕನಿಯಲ್ಲಿ ನಿಂತು ತಮ್ಮ ಗೆಳತಿಯೊಂದಿಗೆ ಮಾತನಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕಟ್ಟಡದಿಂದ ಕೆಳಗೆ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Advertisement