

ಬೆಂಗಳೂರು: ಪಿಜಿಯೊಂದರ ಅಡುಗೆ ಕೋಣೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಯುವಕನೋರ್ವ ಮೃತಪಟ್ಟು, ಮೂವರು ಗಾಯಗೊಂಡಿರು ಘಟನೆ ನಗರದ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಳ್ಳಾರಿ ಮೂಲದ ಅರವಿಂದ್ (23) ಮೃತ ಯುವಕ. ಘಟನೆಯಲ್ಲಿ ವೆಂಕಟೇಶ್, ವಿಶಾಲ್, ಗೋಯಲ್ ಎಂಬುವವರು ಗಾಯಗೊಂಡಿದ್ದು, ಮೂವರ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.
ಕುಂದಲಹಳ್ಳಿಯ ಸೆವೆನ್ ಹಿಲ್ಸ್ ಶ್ರೀಸಾಯಿ ಪಿ.ಜಿ.ಯ ಎರಡನೇ ಮಹಡಿಯಲ್ಲಿ ಸಂಜೆ 6.30ರ ಸುಮಾರಿಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಪಿ,ಜಿಯಲ್ಲಿ ಸುಮಾರು 52 ಮಂದಿ ವಾಸವಿದ್ದರು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿ ಬೆಂಕಿ ನಂದಿಸಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಕಟ್ಟಡದ ವಿವಿಧ ಕಡೆ ಬಿರುಕು ಬಿಟ್ಟಿದೆ. ಅಡುಗೆ ಅನಿಲ ಸೋರಿಕೆಯಾಗಿ ಈ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Advertisement