

ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದ್ದು, ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಡಿಸೆಂಬರ್ 31, 2025 ರಂದು ಮಧ್ಯಾಹ್ನ 2 ರಿಂದ ಜನವರಿ 1, 2026 ರಂದು ಬೆಳಿಗ್ಗೆ 10 ಗಂಟೆಯವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ. ಈ ಮೂಲಕ ನಂದಿ ಹಿಲ್ಸ್ಗೆ ಸಾರ್ವಜನಿಕರ ಪ್ರವೇಶ ಮತ್ತು ಹೊಸ ವರ್ಷ ನಿಮಿತ್ತ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ.
ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಈ ಅವಧಿಯಲ್ಲಿ ಗಿರಿಧಾಮದಲ್ಲಿ ಅತಿಥಿ ಕೊಠಡಿಗಳಿಗೆ ಮುಂಗಡ ಬುಕಿಂಗ್ ಹೊಂದಿರುವ ಪ್ರವಾಸಿಗರಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿರುತ್ತದೆ. ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಮನವಿ ಮಾಡಿದೆ.
Advertisement