ತಮ್ಮ ಕಷ್ಟ ಕೇಳಲು ಬಂದ ರೋಹಿಣಿ ಸಿಂಧೂರಿ ಸರ್ಕಾರಿ ಅತಿಥಿ ಗೃಹ ಬಿಟ್ಟು ಜಿಂದಾಲ್‌ ಟೌನ್‌ಶಿಪ್‌ನಲ್ಲಿ ವಾಸ್ತವ್ಯ ಹೂಡಿದ್ದೇಕೆ? ತನಿಖೆಗೆ ರೈತರ ಆಗ್ರಹ

ಜಿಂದಾಲ್‌ ಕಂಪನಿಯು ಉಕ್ಕು ಉತ್ಪಾದನೆ ಜತೆಗೆ, ಸಂಡೂರಿನಲ್ಲಿ ಗಣಿಗಾರಿಕೆಯಲ್ಲೂ ತೊಡಗಿದೆ. ಇತ್ತೀಚೆಗೆ 4 ಗಣಿಗಳನ್ನು ಹರಾಜಿನಲ್ಲಿ ಖರೀದಿ ಮಾಡಿದೆ.
Rohini sindhuri
ರೋಹಿಣಿ ಸಿಂಧೂರಿ
Updated on

ಬಳ್ಳಾರಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಡಿ. 25ರಿಂದ 27ರ ವರೆಗೆ ಬಳ್ಳಾರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ವ್ಯಾಪಕ ಗಣಿಗಾರಿಕೆಯಿಂದ ಕೃಷಿಗೆ ಆಗುತ್ತಿರುವ ತೊಂದರೆಗಳ ಕುರಿತು ರೋಹಿಣಿ ಅವರಿಗೆ ಮನವಿ ಸಲ್ಲಿಸಲು ರೈತರು ಎರಡು ದಿನ ಕಾದಿದ್ದರು.

ಈ ವೇಳೆ ಸಿಂಧೂರಿ ಅವರು ಸರ್ಕಾರಿ ಅತಿಥಿ ಗೃಹದ ಬದಲು ಜಿಂದಾಲ್ ಟೌನ್‌ಶಿಪ್‌ನಲ್ಲಿ ತಂಗಿದ್ದರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಎರಡು ರೈತ ಸಂಘಟನೆಗಳು ಒತ್ತಾಯಿಸಿವೆ. ಜಿಂದಾಲ್‌ ಕಂಪನಿಯು ಉಕ್ಕು ಉತ್ಪಾದನೆ ಜತೆಗೆ, ಸಂಡೂರಿನಲ್ಲಿ ಗಣಿಗಾರಿಕೆಯಲ್ಲೂ ತೊಡಗಿದೆ. ಇತ್ತೀಚೆಗೆ 4 ಗಣಿಗಳನ್ನು ಹರಾಜಿನಲ್ಲಿ ಖರೀದಿ ಮಾಡಿದೆ.

ಆದರೆ, ಈ ಗಣಿಗಳ ಹರಾಜಿನ ವೇಳೆ ಸರ್ಕಾರ ಸುಪ್ರೀಂ ಕೋರ್ಟ್‌ನ ಆದೇಶಗಳನ್ನು ಉಲ್ಲಂಘಿಸಿದೆ ಎಂದು ಕೇಂದ್ರದ ಉನ್ನತಾಧಿಕಾರಿ ಸಮಿತಿಯು ಸುಪ್ರಿಂ ಕೋರ್ಟ್‌ಗೆ ವರದಿ ನೀಡಿದೆ. ಈ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿರುವ ಜಿಂದಾಲ್‌ ಕಂಪನಿ, ಸರ್ಕಾರದ ವಿವಿಧ ಇಲಾಖೆಗಳನ್ನು ಪ್ರತಿವಾದಿಯಾಗಿಸಿದೆ.

ಇದರಲ್ಲಿ ಸಿ ಆ್ಯಂಡ್‌ ಐನ ಈಗಿನ ಕಾರ್ಯದರ್ಶಿ ರೋಹಿಣಿ ಅವರೂ ಪ್ರತಿವಾದಿಯಾಗಿದ್ದಾರೆ. ಹೀಗಿದ್ದರೂ, ಅದೇ ಜಿಂದಾಲ್‌ನಲ್ಲಿ ಆತಿಥ್ಯ ಪಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ರೈತ ಸಂಘ ಆರೋಪಿಸಿದೆ. ಸರ್ಕಾರಿ ಅಧಿಕಾರಿಯಾಗಿದ್ದರೂ, ಸರ್ಕಾರದ ವಸತಿಗೃಹ ಬಳಸದೇ, ಖಾಸಗಿ ಉದ್ದಿಮೆದಾರರ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿರುವುದು ಆಕ್ಷೇಪಾರ್ಹ.

Rohini sindhuri
IAS ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮಕ್ಕೆ ಸಾ.ರಾ ಮಹೇಶ್ ಆಗ್ರಹ

ತಮ್ಮ ಈ ಪ್ರವಾಸಕ್ಕೆ ರಜಾ ದಿನದಲ್ಲಿಯೂ ಸರ್ಕಾರಿ ಅಧಿಕಾರಿಗಳನ್ನು, ಸರ್ಕಾರದ ವಾಹನಗಳನ್ನು ರೋಹಿಣಿ ಬಳಸಿದ್ದಾರೆ. ಈ ಮೂಲಕ ಕರ್ನಾಟಕ ನಾಗರಿಕ ಸೇವೆಗಳು (ನಡವಳಿಕೆ) ನಿಯಮಗಳು– 1966 ಅನ್ನು ಅವರು ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಈ ಕುರಿತು ದೂರು ಅರ್ಜಿಯನ್ನು ಡಿ. 28ರಂದು ಮುಖ್ಯಕಾರ್ಯದರ್ಶಿಗೆ ರವಾನಿಸಲಾಗಿದೆ.

ಜಿಂದಾಲ್ ಗ್ರೂಪ್ ಈ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದು, ವಾಣಿಜ್ಯ ಮತ್ತು ಕೈಗಾರಿಕೆಗಳು ಸೇರಿದಂತೆ ಹಲವಾರು ಸರ್ಕಾರಿ ಇಲಾಖೆಗಳನ್ನು ಪ್ರತಿವಾದಿಗಳಾಗಿ ಹೆಸರಿಸಿದೆ. ಇಲಾಖೆಯ ಕಾರ್ಯದರ್ಶಿಯಾಗಿ, ಸಿಂಧೂರಿ ಕೂಡ ಈ ಪ್ರಕರಣದಲ್ಲಿ ಪ್ರತಿವಾದಿಯಾಗಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ, ಕಂಪನಿಯ ಒಡೆತನದ ಸೌಲಭ್ಯಗಳಲ್ಲಿ ಅವರ ವಾಸ್ತವ್ಯವು ಗಂಭೀರ ಅನುಮಾನಗಳನ್ನು ಹುಟ್ಟುಹಾಕುತ್ತದೆ ಮತ್ತು ಹಿತಾಸಕ್ತಿ ಸಂಘರ್ಷ ಸೃಷ್ಟಿಸುತ್ತದೆ ಎಂದು ರೈತ ಮುಖಂಡರೊಬ್ಬರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com