ಲೈಂಗಿಕ ದೌರ್ಜನ್ಯ ಪ್ರಕರಣ: ದೋಷ ಮುಕ್ತಗೊಳಿಸಿದ ನ್ಯಾಯಾಲಯ, ಎಚ್‌.ಡಿ.ರೇವಣ್ಣ ನಿರಾಳ

ದೂರು ದಾಖಲಿಸಲು ಅಥವಾ ಪ್ರಾಸಿಕ್ಯೂಷನ್ ಆರಂಭಿಸಲು ಸಾಕಷ್ಟು ವಿಳಂಬವಾಗಿರುವ ಕಾರಣಕ್ಕೆ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಲು ನ್ಯಾಯಾಲಯ ನಿರಾಕರಿಸಿದೆ.
HD Revanna
ಎಚ್ ಡಿ ರೇವಣ್ಣ
Updated on

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಜೆಡಿಎಸ್‌ ಹೊಳೆನರಸೀಪುರ ಶಾಸಕ ಎಚ್‌.ಡಿ. ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

2024ರಲ್ಲಿ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ರೇವಣ್ಣ ಅವರ ವಿರುದ್ಧ ದಾಖಲಾದ ಲೈಂಗಿಕ ಕಿರುಕುಳ ಆರೋಪವನ್ನು ವಿಶೇಷ ನ್ಯಾಯಾಲಯವು ಕೈಬಿಟ್ಟಿದೆ.

ದೂರು ದಾಖಲಿಸಲು ಅಥವಾ ಪ್ರಾಸಿಕ್ಯೂಷನ್ ಆರಂಭಿಸಲು ಸಾಕಷ್ಟು ವಿಳಂಬವಾಗಿರುವ ಕಾರಣಕ್ಕೆ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಲು ನಗರದ 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ (ಎಸಿಜೆಎಂ) ಕೆ.ಎನ್‌. ಶಿವಕುಮಾರ್ ಅವರು ನಿರಾಕರಿಸಿದ್ದು, ಎಚ್.ಡಿ. ರೇವಣ್ಣ ಅವರ ವಿರುದ್ಧದ ಆರೋಪಗಳನ್ನು ಕೈಬಿಟ್ಟು ಆದೇಶಿಸಿದ್ದಾರೆ.

ಪ್ರಕರಣದ ಮೊದಲ ಆರೋಪಿಯಾಗಿರುವ ಎಚ್.ಡಿ. ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354ಎ ಅಡಿಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪ ‌ಮಾಡಲಾಗಿದೆ. ಆದರೆ, ಈ ಅಪರಾಧಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲು ಅಥವಾ ಪ್ರಾಸಿಕ್ಯೂಷನ್ ಆರಂಭಿಸಲು ಸಾಕಷ್ಟು ವಿಳಂಬವಾಗಿದ್ದು, ಈ ವಿಳಂಬವನ್ನು ಮನ್ನಿಸಲು ಇದು ಸೂಕ್ತ ಪ್ರಕರಣವಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ಎಚ್‌.ಡಿ. ರೇವಣ್ಣ ವಿರುದ್ಧದ ಆರೋಪಗಳನ್ನು ಕೈಬಿಟ್ಟಿದೆ.

ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್‌.ಡಿ. ರೇವಣ್ಣ ಹಾಗೂ ಅವರ ಮಗ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ 2024ರ ಏಪ್ರಿಲ್‌ 28ರಂದು ಪ್ರಕರಣ ದಾಖಲಾಗಿತ್ತು.

HD Revanna
ಹೆಚ್.ಡಿ ರೇವಣ್ಣ ವಿರುದ್ಧ ಮನೆಕೆಲಸದಾಕೆಯಿಂದ FIR: ರದ್ದುಗೊಳಿಸಿ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com