

ಬೆಂಗಳೂರು: ಸ್ಲೀಪರ್ ಕೋಚ್ ಬಸ್ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ಸ್ಲೀಪರ್ ಕೋಚ್ ಬಸ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೆಂಗಳೂರಿನಿಂದ ಚೆನೈ ಕಡೆಗೆ ಹೊರಟಿದ್ದ ಬಸ್ ಹಾಗೂ ಮತ್ತೊಂದು ಕಡೆಯಿಂದ ಬರುತ್ತಿದ್ದ ಬಸ್ಗಳ ನಡುವೆ ಅಪಘಾತ ಸಂಭವಿಸಿದೆ.
ಬಸ್ ಮುಂಭಾಗ ಸಂಪೂರ್ಣ ಜಖಂ
ಚಂದಾಪುರ ಫ್ಲೈಓವರ್ ಮೇಲೆ ಸ್ಲೀಪರ್ ಬಸ್ಗಳ ಅಪಘಾತಕ್ಕೀಡಾಗಿದೆ. ಸ್ಲೀಪರ್ ಬಸ್ಗೆ ಮತ್ತೊಂದು ಸ್ಲೀಪರ್ ಬಸ್ ಹಿಂಬದಿಯಿಂದ ಡಿಕ್ಕಿಯಾಗಿದ್ದು, ಬಸ್ಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಅತಿ ವೇಗವೇ ಅಪಘಾತಕ್ಕೆ ಕಾರಣ
ಎರಡೂ ಬಸ್ಗಳು ಅತಿ ವೇಗವಾಗಿ ಚಲಿಸುತ್ತಿದ್ದ ಪರಿಣಾಮ ಚಾಲಕರ ನಿಯಂತ್ರಣ ಕಳೆದುಕೊಂಡ ಬಸ್ಗಳು ಡಿಕ್ಕಿಯಾಗಿದೆ. ಅಪಘಾತದಿಂದ ಎರಡು ಬಸ್ಗಳು ಜಖಂಗೊಂಡಿದೆ. ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಹತ್ತಿರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement