
ಬೆಂಗಳೂರು: ರಾಯಚೂರು ವಿಶ್ವ ವಿದ್ಯಾನಿಲಯ ಎಂದು ಕರೆಯಲ್ಪಡುವ ವಿಶ್ವ ವಿದ್ಯಾನಿಲಯ ಇನ್ನೂ ಮುಂದೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯವಾಗಿ ಮರು ನಾಮಕರಣಗೊಂಡಿದೆ.
ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರು ನಾಮಕರಣ ಮಾಡುವ ವಿಧೇಯಕವನ್ನು ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾಗಿತ್ತು.
ಇದೀಗ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, 2024ಕ್ಕೆ ರಾಜ್ಯಪಾಲರ ಅನುಮೋದನೆ ದೊರಕಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಯಚೂರು ವಿಶ್ವವಿದ್ಯಾನಿಲಯವನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ರಾಯಚೂರು ವಿಶ್ವವಿದ್ಯಾಲಯಗೆ “ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ” ಮರುನಾಮಕಾರಣ ಮಾಡಲು ತೀರ್ಮಾನಿಸಲಾಗಿತ್ತು.
Advertisement