ಕಣ್ವ ಅಣೆಕಟ್ಟು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ: ಜನಪ್ರತಿನಿಧಿಗಳೊಂದಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚರ್ಚೆ

ಜಲ ವಿಹಾರ, ಜಲ ಕ್ರೀಡೆ, ಪಾರ್ಕ್ ನಿರ್ಮಾಣ ಸೇರಿದಂತೆ ಅಲ್ಲಿ ಕೈಗೊಳ್ಳಬಹುದಾದ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಸಮಾಲೋಚನೆ ನಡೆಸಿದರು.
DCM DK Shivakumar
ಕಣ್ವ ಜಲಾಶಯದಲ್ಲಿ ಡಿಕೆ ಶಿವಕುಮಾರ್, ಶಾಸಕ ಸಿ.ಪಿ. ಯೋಗೇಶ್ವರ್ ಮತ್ತಿತರರು
Updated on

ಚನ್ನಪಟ್ಟಣ: ಕಣ್ವ ಅಣೆಕಟ್ಟು ಪ್ರದೇಶವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಮಾಡುವ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ಜನಪ್ರತಿನಿಧಿಗಳ ಜೊತೆ ಸಮಾಲೋಚನೆ ನಡೆಸಿದರು.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಂತರ ಮತದಾರರಿಗೆ "ಕೃತಜ್ಞತಾ ಸಮಾವೇಶ" ನಡೆಸಿದ ಬಳಿಕ ಕಣ್ವ ಅಣೆಕಟ್ಟಿಗೆ ಭೇಟಿ ನೀಡಿದ ಡಿಕೆ ಶಿವಕುಮಾರ್, ಭಾನುವಾರ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಸಿ.ಪಿ ಯೋಗೇಶ್ವರ್, ಮಾಜಿ ಸಂಸದ ಡಿ.ಕೆ. ಸುರೇಶ್, ಶಾಸಕರಾದ ಬಾಲಕೃಷ್ಣ, ರಂಗನಾಥ್, ಎನ್ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಎಸ್.ರವಿ ಮತ್ತಿತರ ನಾಯಕರು ಉಪಸ್ಥಿತರಿದ್ದರು.

ಬಳಿಕ ಡಿ.ಕೆ. ಶಿವಕುಮಾರ್ ಜನಪ್ರತಿನಿಧಿಗಳ ಜತೆ ಮೋಟಾರ್ ಬೋಟ್ ಮೂಲಕ ಕಣ್ವ ಡ್ಯಾಮ್ ನಲ್ಲಿ ವಿಹಾರ ನಡೆಸಿದರು. ಕಣ್ವ ಅಣೆಕಟ್ಟಿನ ಪ್ರದೇಶವನ್ನು ಪ್ರವಾಸೋದ್ಯಮದ ತಾಣವಾಗಿ ರೂಪಿಸಲು ಇರುವ ಅವಕಾಶಗಳ ಕುರಿತು ಚರ್ಚೆ ನಡೆಸಿದರು.

ಜಲ ವಿಹಾರ, ಜಲ ಕ್ರೀಡೆ, ಪಾರ್ಕ್ ನಿರ್ಮಾಣ ಸೇರಿದಂತೆ ಅಲ್ಲಿ ಕೈಗೊಳ್ಳಬಹುದಾದ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com