ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮೀ ಮುಖ್ಯವಾಹಿನಿಗೆ; ಎಸ್ಪಿ ಕಚೇರಿಯಲ್ಲಿ ಶರಣಾಗತಿ

ಶರಣಾಗತಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ ಲಕ್ಷ್ಮೀ ತೊಂಬಟ್ಟು ಅವರು, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದರು.
ತೊಂಬಟ್ಟು ಲಕ್ಷ್ಮೀ
ತೊಂಬಟ್ಟು ಲಕ್ಷ್ಮೀ
Updated on

ಉಡುಪಿ: ಹಲವು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ನಕ್ಸಲ್ ಲಕ್ಷ್ಮೀ ಭಾನುವಾರ (ಫೆ.2) ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗಿದ್ದಾರೆ.

ಶರಣಾಗತಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ ಲಕ್ಷ್ಮೀ ತೊಂಬಟ್ಟು ಅವರು, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದರು.

ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಸದಸ್ಯ ಶ್ರೀಪಾಲ್ ಜೊತೆ ನಕ್ಸಲ್ ಲಕ್ಷ್ಮಿ, ಎಸ್‌ಪಿ ಕಚೇರಿಗೆ ಆಗಮಿಸಿದರು.

ಅಲ್ಲಿ ಶರಣಾಗತಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಲಾಯಿತು. ಬಳಿಕ ಭದ್ರತೆಯೊಂದಿಗೆ ಡಿಸಿ ಕಚೇರಿಗೆ ಲಕ್ಷ್ಮಿಯನ್ನು ಪೊಲೀಸರು ಕರೆದೊಯ್ದರು. ಶರಣಾದ ನಕ್ಸಲ್ ಜೊತೆ ಆಕೆಯ ಸಹೋದರ ಮತ್ತು ಬಂಧುಗಳು ಹಾಜರಿದ್ದರು.

ನಕ್ಸಲ್‌ ಚಟುವಟಿಕೆಗಳಲ್ಲಿ ಉಡುಪಿ ಜಿಲ್ಲೆಯ ವಿಕ್ರಂಗೌಡ ಹಾಗೂ ಲಕ್ಷ್ಮಿ ತೊಂಬಟ್ಟು ತೊಡಗಿಸಿಕೊಂಡಿದ್ದರು. ಲಕ್ಷ್ಮೀಯವರು 2006 ಮಾರ್ಚ್ 6ರಂದು ಊರು ತೊರೆದಿದ್ದರು. ಅವರು ನಕ್ಸಲ್ ಹೋರಾಟದಲ್ಲಿ ಸಕ್ರಿಯರಾಗಿದ್ದರು.

ತೊಂಬಟ್ಟು ಲಕ್ಷ್ಮೀ
ಚಿಕ್ಕಮಗಳೂರು ಜಿಲ್ಲಾಧಿಕಾರಿ, SP ಮುಂದೆ ನಕ್ಸಲ್ ರವೀಂದ್ರ ಶರಣು

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com