ಭೂಕಬಳಿಕೆ ಆರೋಪ: HDK ವಿರುದ್ಧ ತನಿಖೆಗೆ ಸರ್ಕಾರ ಮುಂದು..!
ಬೆಂಗಳೂರು: ಕೇತಗಾನಹಳ್ಳಿ ಬಳಿಯ ಸರ್ಕಾರದ ಜಮೀನು ಒತ್ತುವರಿ ಮಾಡಿರುವ ಆರೋಪ ಕುರಿತು ಹೈಕೋರ್ಟ್ ಸೂಚನೆಯಂತೆ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್'ಡಿ.ಕುಮಾರಸ್ವಾಮಿ ವಿರುದ್ಧ ತನಿಖೆಗೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೇರೈಗೌಡ ಅವರು, ಹೈಕೋರ್ಟ್ ಸೂಚನೆಯಂತೆ ತನಿಖೆಗೆ ನಡೆಸಲು ಉನ್ನತ ಅಧಿಕಾರಿಗಳ ತಂಡ ರಚಿಸಲಾಗಿದ್ದು, ಹೈಕೋರ್ಟ್ ಸೂಚನೆಗಳ ಪಾಲಿಸುವಂತೆ ಸೂಚಿಸಲಾಗಿದೆ. ಹೈಕೋರ್ಟ್ ಸೂಚನೆ ನೀಡಿದಾಗ ಸರ್ಕಾರ ಅದನ್ನು ಗೌರವಿಸಬೇಕಾಗುತ್ತದೆ. ಹೈಕೋರ್ಟ್ ನೀಡಿದ ಸಮಯದೊಳಗೆ ಎಸ್‌ಐಟಿ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಹೇಳಿದರು.
ಕೇತಗಾನಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 8, 9, 10, 16 ಮತ್ತು 79 ರಲ್ಲಿ 14.04 ಎಕರೆ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಲಾಗಿದೆ ಎಂಬ ಕುಮಾರಸ್ವಾಮಿ ಅವರ ವಿರುದ್ಧ ಕೇಳಿ ಬಂದಿದೆ.
ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಡಿ.ಸಿ. ತಮ್ಮಣ್ಣ ವಿರುದ್ಧ ಮಂಡ್ಯದ ಮಾಜಿ ಸಂಸದ ದಿವಂಗತ ಜಿ. ಮಾದೇಗೌಡ ಅವರು ನೀಡಿದ ದೂರಿನ ಆಧಾರದ ಮೇಲೆ, ಕರ್ನಾಟಕ ಲೋಕಾಯುಕ್ತರು 2014 ರಲ್ಲಿ ಭೂಮಿಯನ್ನು ವಶಪಡಿಸಿಕೊಳ್ಳಲು ಆದೇಶಿಸಿದ್ದರು. ಯಾವುದೇ ಕ್ರಮ ಕೈಗೊಳ್ಳದ ಕಾರಣ, ಸಮಾಜ ಪರಿವರ್ತನಾ ಸಮುದಾಯ ಎಂಬ ಸರ್ಕಾರೇತರ ಸಂಸ್ಥೆಯು 2020 ರಲ್ಲಿ ಸರ್ಕಾರದ ವಿರುದ್ಧ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡಿತ್ತು. ನ್ಯಾಯಾಲಯದ ಸೂಚನಯಂತೆ ಇದೀಗ ಸರ್ಕಾರ ಕರಮ ಕೈಗೊಂಡಿದ್ದು, ಕುಮಾರಸ್ವಾಮಿ ವಿರುದ್ಧದ ಭೂಕಬಳಿಕೆ ಆರೋಪಗಳ ಕುರಿತ ತನಿಖೆಗಾಗಿ ಬೆಂಗಳೂರು ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಐದು ಸದಸ್ಯರ ಎಸ್‌ಐಟಿಯನ್ನು ರಚಿಸಿದೆ.