
ಗದಗ: ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿ, ವಿಡಿಯೋ ಮಾಡಿದ ಆಘಾತಕಾರಿ ಘಟನೆ ಗದಗ ಜಿಲ್ಲೆಯ ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಿ ಎಸಗಿದ ಆರೋಪದ ಮೇಲೆ ಸುಲೇಮಾನ್ ನನ್ನು ಮತ್ತು ಕೃತ್ಯದ ವಿಡಿಯೋ ಮಾಡಿದ್ದ ಅಲ್ತಾಫ್ ನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ನರೇಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಸುಲೈಮಾನ್ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಮತ್ತು ಆತನ ಸಹಚರ ಅಲ್ತಾಫ್ ಇಡೀ ಕೃತ್ಯವನ್ನು ವಿಡಿಯೋ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಮಹಿಳೆಯ ಪೋಷಕರು ಇತ್ತೀಚೆಗೆ ತಮ್ಮ ಮಗಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ತಿಳಿದುಕೊಂಡಿದ್ದು, ಸೋಮವಾರ ನರೇಗಲ್ ಪೊಲೀಸರಿಗೆ ದೂರು ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Advertisement