ಬೇನಾಮಿ ಆಸ್ತಿ ಆರೋಪ: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ!

1983ರಲ್ಲಿ ಆಲನಹಳ್ಳಿ ಸರ್ವೇ ನಂಬರ್ 113/4ರಲ್ಲಿ 1 ಎಕರೆ ಖರೀದಿ ಮಾಡಿದ್ದಾರೆ. 1996ರಲ್ಲಿ ಮುಡಾ ಅಂತಿಮ ಅಧಿಸೂಚನೆ ಹೊರಡಿಸಿದ್ದರೂ ಡಿನೋಟಿಫೈ ಆಗಿದೆ.
CM Siddaramaiah
ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ
Updated on

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ಮತ್ತೊಂದು ದೂರು ಸಲ್ಲಿಸಿದ್ದಾರೆ. ತನಿಖೆಗೆ ಆಗ್ರಹಿಸಿದ್ದು, ಅಧಿಕಾರಿಗಳು ವಿಳಂಬ ಮಾಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯನವರು ಕೆಸರೆ ಗ್ರಾಮದ ಜಾಗವನ್ನ ಅರಿಶಿನ ಕುಂಕುಮ ರೂಪದಲ್ಲಿ ಪತ್ನಿಗೆ ಕೊಟ್ಟಿದ್ದಾರೆ ಎಂದಿದ್ದರು. ಈಗ ಮತ್ತೆ ಮಲ್ಲಿಕಾರ್ಜುನಸ್ವಾಮಿ ಒಂದು ಎಕರೆ ದಾನ ಮಾಡಿದ್ದಾರೆ. ಯಾಕೆ ಮಲ್ಲಿಕಾರ್ಜುನಸ್ವಾಮಿ ಖರೀದಿ ಮಾಡಿದ ಭೂಮಿಗಳನ್ನೇ ದಾನ ಮಾಡ್ತಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯನವರು ಎಲ್ಲಿಯೂ ಹೇಳಿಲ್ಲ ಯಾಕೆ? " ಎಂದು ಪ್ರಶ್ನೆ ಮಾಡಿದ್ದಾರೆ.

ಪಾರ್ವತಿ ಅವರ ಕುಟುಂಬದ ಒಡೆತನದ ಒಟ್ಟು ಆಸ್ತಿ ಮತ್ತು ಮಲ್ಲಿಕಾರ್ಜುನ ಸ್ವಾಮಿ ಅವರು ಸಂಪಾದಿಸಿರುವ ಆಸ್ತಿಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆಲನಹಳ್ಳಿಯಲ್ಲಿ 1 ಎಕರೆ ಡಿನೋಟಿಫೈ: 1983ರಲ್ಲಿ ಆಲನಹಳ್ಳಿಯ ಸರ್ವೇ ನಂಬರ್ 113/4ರಲ್ಲಿ 1 ಎಕರೆ ಖರೀದಿ ಮಾಡಿದ್ದಾರೆ. 1996ರಲ್ಲಿ ಮುಡಾ ಅಂತಿಮ ಅಧಿಸೂಚನೆ ಹೊರಡಿಸಿದ್ದರೂ ಡಿನೋಟಿಫೈ ಆಗಿದೆ. ಸಿದ್ದರಾಮಯ್ಯ ಪ್ರಭಾವದಿಂದ ಡಿನೋಟಿಫೈ ಆಗಿದೆ. ಅದೇ ಭೂಮಿಯನ್ನ 2010 ಅಕ್ಟೊಬರ್‌ನಲ್ಲಿ ಪಾರ್ವತಿಗೆ ದಾನ ಮಾಡಲಾಗಿದೆ. ತದನಂತರ ಅದನ್ನು ಒಂದು ತಿಂಗಳೊಳಗೆ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರಿಗೆ ವರ್ಗಾಯಿಸಲಾಗಿದೆ. ಇದಾದ ನಾಲ್ಕು ತಿಂಗಳಲ್ಲಿ ಯತೀಂದ್ರ ಆ ಭೂಮಿಯನ್ನು ಮೂರನೇ ವ್ಯಕ್ತಿಗೆ ಮಾರಾಟ ಮಾಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದಾರೆ.

CM Siddaramaiah
MUDA ಹಗರಣ: ಲೋಕಾಯುಕ್ತ ಕ್ಲೀನ್ ಚಿಟ್ ಬಗ್ಗೆ ಗೊತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಈ ವ್ಯವಹಾರಗಳನ್ನು ಸಿದ್ದರಾಮಯ್ಯ ಏಕೆ ಸಾರ್ವಜನಿಕವಾಗಿ ಬಹಿರಂಗಪಡಿಸಿಲ್ಲ ಎಂದು ಪ್ರಶ್ನಿಸಿರುವ ಕೃಷ್ಣ, ಮಲ್ಲಿಕಾರ್ಜುನ ಸ್ವಾಮಿ ಅವರ ಹೆಸರಿನಲ್ಲಿ ಸಿಎಂ ಬೇನಾಮಿ ಆಸ್ತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಈ ಬಗ್ಗೆ ಲೋಕಾಯುಕ್ತರು ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿರುವ ಸ್ನೇಹಮಯಿ ಕೃಷ್ಣ, ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಳಂಬ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com