
ಬೆಂಗಳೂರು: ದೇಶದಲ್ಲಿ ದೊಡ್ಡ ಮಟ್ಟದ ಸಂಚಲನಕ್ಕೆ ಕಾರಣವಾಗಿರುವ ಹಿಜಾಬ್ ನಿಷೇಧ ಪ್ರಕರಣ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್ ಬಳಕೆಗೆ ಅವಕಾಶದ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಹತ್ವದ ಹೇಳಿಕೆಯನ್ನ ನೀಡಿದ್ದಾರೆ.
ಈ ಕುರಿತು ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್ ಗೆ ಅವಕಾಶ ನೀಡುವ ವಿಚಾರವಾಗಿ ಸುಧೀರ್ಘವಾಗಿ ಚರ್ಚೆ ಮಾಡುತ್ತೇವೆ. ಇನ್ನು ಒಂದು ತಿಂಗಳು ಸಮಯವಿದೆ ನೋಡೋಣ ಎಂದಿದ್ದಾರೆ.
ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ದೌರ್ಜನ್ಯಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದರ ಮಧ್ಯ ನೆನ್ನೆ ರಾಜ್ಯಪಾಲರಿಗೆ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆ ಕುರಿತು ಕರಡು ಪ್ರತಿಯನ್ನು ಕಳುಹಿಸಲಾಗಿದ್ದು, ಇಂದು ರಾಜ್ಯಪಾಲರು ಕರಡು ಪ್ರತಿಯನ್ನು ಪರಿಶೀಲಿಸಿ ಅಂಕಿತ ಹಾಕುವ ಸಾಧ್ಯತೆ ಇದೆ.
ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಈ ಹಿಂದೆ ಶಿಕ್ಷೆ ಮೂರು ವರ್ಷ ಬಿಟ್ಟು ಈಗ 10 ವರ್ಷ ಮಾಡಿದ್ದೇವೆ. ದಂಡದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಿದ್ದೇವೆ. ಮಸೂದೆಯನ್ನು ರಾಜ್ಯಪಾಲರಿಗೆ ಕಳುಹಿಸಿದ್ದೇವೆ. ಇವತ್ತು ಪರಿಶೀಲಿಸಿ ರಾಜಪಾಲರು ಅಂಕಿತ ಹಾಕಬಹುದು. ಕಾನೂನಿನ ತೊಡಕುಗಳನ್ನು ಸರಿಪಡಿಸಿದ್ದೇವೆ. ಕಾನೂನಿನ ತೊಂದರೆ ಬರುವುದಿಲ್ಲ ಅಂತ ಅಂದುಕೊಂಡಿದ್ದೇವೆ ಎಂದು ತಿಳಿಸಿದರು.
ಗೋ ಹತ್ಯೆ ಮಾಡುವವರನ್ನು ಗುಂಡಿಕ್ಕಿ ಕೊಲ್ಲುತ್ತೇನೆ ಎಂದು ಶಾಸಕ ಮಂಕಾಳು ವೈದ್ಯ ಹೇಳಿಕೆ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ಮಂಕಾಳು ವೈದ್ಯ ವಯಕ್ತಿಕವಾಗಿ ಹೇಳಿರುತ್ತಾರೆ ಎಂದು ತಿಳಿಸಿದರು.
Advertisement