
ಯಾದಗಿರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಡಿಕ್ಕಿಯಾಗಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯ ಸುರಪುರದ ತಿಂಥಣಿ ಬಳಿ ಐವರು ತೆರಳುತ್ತಿದ್ದ ಬೈಕ್ ಗೆ ಬಸ್ ಹೊಡೆದಿತ್ತು.
ಮೃತರನ್ನು ಯಾದಗಿರಿಯ ಶಹಾಪುರದ ಹಳಿಸಗರ ನಿವಾಸಿಗಳಾದ ಆಂಜನೇಯ(35) ಗಂಗಮ್ಮ(28) ಮತ್ತು ಅವರ ಪುತ್ರ 1 ವರ್ಷದ ಹನುಮಂತು ಮತ್ತು ಸಹೋದರನ ಮಕ್ಕಳಾದ ಪವಿತ್ರ(5) ಮತ್ತು ರಾಯಪ್ಪ(3) ಮೃತ ದುರ್ದೈವಿಗಳು. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement