ಸಿಎಂ ಬದಲಾವಣೆ ಸೂಚನೆಗಳಿಲ್ಲ; ಎರಡನೇ ಏರ್‌ಪೋರ್ಟ್‌ಗೆ ಸ್ಥಳ ಅಂತಿಮಗೊಂಡಿಲ್ಲ: ಪರಮೇಶ್ವರ

ಈ ವರ್ಷ ನವೆಂಬರ್ 15 ಅಥವಾ 16 ರೊಳಗೆ ಸಿಎಂ ಸಿದ್ದರಾಮಯ್ಯ ಅವರನ್ನು ಬದಲಾಯಿಸಲಾಗುತ್ತದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ನೀಡಿರುವ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.
Dr G Parameshwar
ಡಾ ಜಿ ಪರಮೇಶ್ವರ್
Updated on

ಬೆಂಗಳೂರು: ರಾಜ್ಯದಲ್ಲಿ ಈ ವರ್ಷದ ಅಂತ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎಂಬ ಹೇಳಿಕೆಯನ್ನು ತಳ್ಳಿಹಾಕಿರುವ ಗೃಹ ಸಚಿವ ಜಿ ಪರಮೇಶ್ವರ ಅವರು, ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಂತಹ ಬದಲಾವಣೆಯ ಸೂಚನೆಯಿಲ್ಲ ಎಂದು ಬುಧವಾರ ಹೇಳಿದ್ದಾರೆ.

ಈ ವರ್ಷ ನವೆಂಬರ್ 15 ಅಥವಾ 16 ರೊಳಗೆ ಸಿಎಂ ಸಿದ್ದರಾಮಯ್ಯ ಅವರನ್ನು ಬದಲಾಯಿಸಲಾಗುತ್ತದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ನೀಡಿರುವ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.

'ಅಶೋಕ ಅವರು ಜ್ಯೋತಿಷ್ಯ ಯಾವಾಗ ಕಲಿತರು ಎಂದು ನಾನು ಅವರನ್ನು ಕೇಳಲು ಬಯಸುತ್ತೇನೆ. ಅವರಿಗೆ ಯಾವ ತರಬೇತಿ ಶಾಲೆ ಜ್ಯೋತಿಷ್ಯವನ್ನು ಕಲಿಸಿದೆ ಎಂದು ನನಗೆ ತಿಳಿದಿಲ್ಲ. ಅಂತಹ ಬದಲಾವಣೆಗಳ ಯಾವುದೇ ಸೂಚನೆಗಳು ನಮ್ಮ ಪಕ್ಷದಲ್ಲಿಲ್ಲ' ಎಂದರು.

ಕಳೆದ ಕೆಲವು ತಿಂಗಳುಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದ್ದು, ಸಚಿವರು ಸೇರಿದಂತೆ ಹಲವು ಸದಸ್ಯರು ಈ ವಿಷಯದ ಬಗ್ಗೆ ಮಾಧ್ಯಮಗಳೊಂದಿಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಆದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಇಂತಹ ಹೇಳಿಕೆ ನೀಡುವುದರಿಂದ ಹಲವರು ದೂರ ಉಳಿದಿದ್ದಾರೆ.

Dr G Parameshwar
ತುಮಕೂರು ಸಮೀಪ 2ನೇ ಏರ್‌ಪೋರ್ಟ್‌ ನಿರ್ಮಾಣ: ಗೃಹ ಸಚಿವ ಡಾ. ಜಿ ಪರಮೇಶ್ವರ್

ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಕುರಿತು ಕೇಳಿದಾಗ, ಸಂಬಂಧಪಟ್ಟ ಸಚಿವ ಎಂಬಿ ಪಾಟೀಲ್ ಅವರು ಈಗಾಗಲೇ ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ ಮತ್ತು ಕೇಂದ್ರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗುವುದು. ವಿಮಾನ ನಿಲ್ದಾಣಕ್ಕೆ ಇನ್ನೂ ಸ್ಥಳ ಅಂತಿಮಗೊಂಡಿಲ್ಲ. ಎರಡು ಅಥವಾ ಮೂರು ಸ್ಥಳಗಳು ಪರಿಗಣನೆಯಲ್ಲಿವೆ ಮತ್ತು ನಾಗರಿಕ ವಿಮಾನಯಾನ ಮಾರ್ಗಸೂಚಿಗಳಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ತುಮಕೂರಿನ ಬಳಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ತಾವು ಒಲವು ತೋರಿದ್ದೀರಿ, ಮತ್ತೆ ಕೆಲವರು ಬಿಡದಿ ಮಾಡುವಂತೆ ಹೇಳುತ್ತಿದ್ದಾರೆ ಎನ್ನುವುದಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ ಅವರು, ‘ನಾವು ನಮ್ಮ ಬೇಡಿಕೆ ಇಟ್ಟಿದ್ದೇವೆ, ಇತರರು ಕೂಡ ಅವರ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಯಾವ ಸ್ಥಳವು ಸೂಕ್ತವಾಗಿದೆ ಎಂಬುದನ್ನು ನಾಗರಿಕ ವಿಮಾನಯಾನ ಸಚಿವಾಲಯ ನಿರ್ಧರಿಸುತ್ತದೆ' ಎಂದರು.

'ಸದ್ಯ ದೇವನಹಳ್ಳಿ ಕಾರ್ಯನಿರ್ವಹಿಸುತ್ತಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬಿಡದಿ ಬಳಿ ಆರಂಭಿಸುವಂತೆ ಪ್ರಸ್ತಾಪಿಸಲಾಗಿತ್ತು. ಆದರೆ, ತಾಂತ್ರಿಕ ಕಾರಣಗಳಿಂದ ಆ ಸಮಯದಲ್ಲಿ ಡಿಜಿಸಿಎ ಅದನ್ನು ತಿರಸ್ಕರಿಸಿತ್ತು. ಈಗ ಬಿಡದಿಯನ್ನು ಮರುಪರಿಶೀಲಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ' ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com