
ಬೆಂಗಳೂರು: ಭ್ರಷ್ಠ ಅಧಿಕಾರಿಗಳಿಗೆ ಐಟಿ ಇಲಾಖೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದೆ. ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸರ್ಕಾರದ ವಿವಿಧ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಕಾಂಟ್ರಾಕ್ಟರ್ ರಾಮಕೃಷ್ಣೇಗೌಡ ಮನೆ, ಎಂ ಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪ ಸೇರಿದಂತೆ ಮೈಸೂರಿನ ಹಲವೆಡೆ ಇಂದು ಬೆಳಗ್ಗೆಯೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ.
ಮೈಸೂರಿನ ದೇವೇಗೌಡ ವೃತ್ತದ ಬಳಿ ಇರುವ ಎಂ ಪ್ರೋ ಪ್ಯಾಲೇಸ್ ಬಳಿ ಬರುತ್ತಿದ್ದಂತೆಯೇ ಭದ್ರತಾ ಸಿಬ್ಬಂದಿಯ ಮೊಬೈಲ್ ಕಿತ್ತುಕೊಂಡಿರುವ ಐಟಿ ಅಧಿಕಾರಿಗಳು ಸುಮಾರು 3 ಗಂಟೆಗಳಿಂದ ಪರಿಶೀಲನೆ ಮಾಡುತ್ತಿದ್ದಾರೆ. ಮೈಸೂರಿನ ರಾಮಕೃಷ್ಣನಗರದಲ್ಲಿರುವ ಗುತ್ತಿಗೆದಾರ ರಾಮಕೃಷ್ಣೇಗೌಡ ನಿವಾಸದ ಮೇಲೂ ದಾಳಿ ನಡೆದಿದೆ. ರಾಮಕೃಷ್ಣೇಗೌಡ ಸರ್ಕಾರದ ಕಂಟ್ರಾಕ್ಟರ್ ಕೆಲಸ ಮಾಡಿಸುತ್ತಿದ್ದಾರೆ. ಇಟ್ಟಿಗೆ ಫ್ಯಾಕ್ಟರಿ ಸೇರಿ ಇನ್ನಿತರ ವ್ಯವಹಾರ ನಡೆಸುತ್ತಿದ್ದಾರೆ.
Advertisement