ಬೆಂಗಳೂರಿಗೆ ದೆಹಲಿ ದುಸ್ಥಿತಿ ಎದುರಾಗುವುದು ಬೇಡ: ವಿದ್ಯುತ್‌ ಚಾಲಿತ ವಾಹನಗಳಿಗೆ ಮಾತ್ರ ಅನುಮತಿ ನೀಡಿ; ಗುಂಡೂರಾವ್ ಮನವಿ

ಪರಿಸರದ ಮೇಲೆ ದೂರಗಾಮಿ ದುಷ್ಪರಿಣಾಮಗಳನ್ನು ಮಿತಿಗೊಳಿಸುವ ನಿಟ್ಟಿನಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸಲು ನಮ್ಮ ತಲೆಮಾರು ಕ್ರಮ ಕೈಗೊಳ್ಳಲೇಬೇಕಿದ್ದು, ಸರ್ಕಾರ ಈ ಬಗ್ಗೆ ಉತ್ತರದಾಯಿತ್ವವನ್ನು ಕೂಡ ಹೊಂದಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆಯ ಬಳಕೆಯನ್ನು ಹೆಚ್ಚಿಸುವುದು ಅತ್ಯಗತ್ಯವಾಗಿರುತ್ತದೆ.
Dinesh Gundu rao
ದಿನೇಶ್ ಗುಂಡೂರಾವ್
Updated on

ಬೆಂಗಳೂರು: ಬೆಂಗಳೂರಿಗೆ ದೆಹಲಿಯಲ್ಲಿ ನಿರ್ಮಾಣವಾಗಿರುವ ದುಸ್ಥಿತಿ ಎದುರಾಗುವುದು ಬೇಡ. ವಿದ್ಯುತ್ ಚಾಲಿತ ವಾಹನಗಳಿಗೆ ಮಾತ್ರ ಅನುಮತಿ ನೀಡಿ ಎಂದು ಸರ್ಕಾರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆದಿರುವ ಅವರು, ಸಾಂಪ್ರಾದಾಯಿಕ ಇಂಧನಗಳಿಂದ ಚಲಿಸುವ ವಾಹನಗಳ ಬಳಕೆಯಿಂದಾಗಿ ವಾಯು ಮಾಲಿನ್ಯ ಜಗತ್ತಿನಲ್ಲಿ ಸರ್ವೇ ಸಾಮಾನ್ಯವಾಗಿದ್ದು, ಇದು ಸಾರ್ವಜನಿಕರ ಆರೋಗ್ಯದ ಮೇಲೆ ನೇರ ದುಷ್ಪರಿಣಾಮ ಬೀರುವುದು ಸರ್ವವೇದ್ಯವಾಗಿದೆ. ವಿಶೇಷವಾಗಿ ಬೆಂಗಳೂರಿನಂತಹ ಮಹಾನಗರಗಳಲ್ಲಿ ಇರುವ ಹೆಚ್ಚಿನ ವಾಹನ ಸಂಖ್ಯೆಯಿಂದಾಗಿ ಮಾಲಿನ್ಯದ ಪ್ರಮಾಣವು ಅಗಾಧವಾಗಿದ್ದು ನಗರದ ಜನ ಸಾಂದ್ರತೆಯೂ ಹೆಚ್ಚಾಗಿರುವ ಕಾರಣ ಮಾಲಿನ್ಯ ಹೆಚ್ಚು ಜನರನ್ನು ಬಾಧಿಸುತ್ತದೆ. ಬೆಂಗಳೂರಿನ ಬೌಗೋಳಿಕ ಸ್ಥಿತಿ ಹಾಗೂ ಹವಾಮಾನಗಳು ವಾಯು ಮಾಲಿನ್ಯಯನ್ನು ಸಂಕೀರ್ಣಗೊಳಿಸುತ್ತವೆ. ದೆಹಲಿಯಂತೆ ವಾಯು ಮಾಲಿನ್ಯಕ್ಕಾಗಿ ಬೆಂಗಳೂರು ಸಹ ಕುಖ್ಯಾತಗೊಳ್ಳುವ ಪೂರ್ವದಲ್ಲಿಯೇ ನಾವು ಎಚ್ಚೆತ್ತುಕೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಪರಿಸರದ ಮೇಲೆ ದೂರಗಾಮಿ ದುಷ್ಪರಿಣಾಮಗಳನ್ನು ಮಿತಿಗೊಳಿಸುವ ನಿಟ್ಟಿನಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸಲು ನಮ್ಮ ತಲೆಮಾರು ಕ್ರಮ ಕೈಗೊಳ್ಳಲೇಬೇಕಿದ್ದು, ಸರ್ಕಾರ ಈ ಬಗ್ಗೆ ಉತ್ತರದಾಯಿತ್ವವನ್ನು ಕೂಡ ಹೊಂದಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆಯ ಬಳಕೆಯನ್ನು ಹೆಚ್ಚಿಸುವುದು ಅತ್ಯಗತ್ಯವಾಗಿರುತ್ತದೆ. ಆದರೆ, ಇದರ ಜೊತೆಯಲ್ಲೇ ನಗರದಲ್ಲಿ ವಿದ್ಯುತ್‌ ಚಾಲಿತ ಇವಿ ವಾಹನಗಳ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ. ಈ ಹಿನ್ನಲೆಯಲ್ಲಿ ಸಾರಿಗೆ ಮೂಲ ಸೌಕರ್ಯವನ್ನು ರೂಪಿಸುವಾಗ ಸಾಂಪ್ರಾದಾಯಿಕ ಇಂಧನಗಳಿಂದ ದೂರ ಸರಿಯುವುದು ಕೇವಲ ವಿಕಲ್ಪವಾಗಿರದೇ ತುರ್ತು ಅಗತ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ನಗರದಲ್ಲಿ ಕಾಯನಿರ್ವಹಿಸುವ ಎಲ್ಲಾ ಆಟೋಗಳು/ಕ್ಯಾಬ್‌ಗಳು/ ಟ್ಯಾಕ್ಸಿಗಳು/ ಸರಕು ಆಟೋಗಳು/ ಘನತ್ಯಾಜ್ಯ ಸಂಗ್ರಹಣೆ ವಾಹನಗಳಿಗೆ ಅನುಮತಿ ನೀಡುವಾಗ ಅವುಗಳು ಇವಿ ವಾಹನಗಳಾಗಿದ್ದಲ್ಲಿ ಮಾತ್ರ ಅನುಮತಿ ನೀಡುವುದು ಸೂಕ್ತ. ಇದಕ್ಕೆ ಪೂರಕವಾಗಿ ಇನ್ನು ಮುಂದೆ ನಗರ ಸಾರಿಗೆ ಬಸ್‌ಗಳನ್ನು ಖರೀದಿಸುವಾಗಲೂ ಸಹ ಎಲೆಕ್ನಿಕ್ ಇಂಧನ ಬಳಸುವ ಇವಿ ಬಸ್‌ಗಳನ್ನು ಮಾತ್ರ ಸಾರಿಗೆ ಸೇವೆಗೆ ಬಳಸಿಕೊಳ್ಳುವುದು ಸೂಕ್ತವೆಂಬುದು ಆರೋಗ್ಯ ಇಲಾಖೆಯ ಅಭಿಪ್ರಾಯವಾಗಿದೆ. ಆದ್ದರಿಂದ ಈ ನಿಟ್ಟಿನಲ್ಲಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ.

ಸಚಿವರ ಪತ್ರ ಕುರಿತು ಪ್ರತಿಕ್ರಿಯೆ ನೀಡಿರುವ ರಾಮಲಿಂಗಾ ರೆಡ್ಡಿಯವರು, ನನಗೆ ಪತ್ರ ಬಂದಿದೆ. ಕೆಲವು ಕ್ರಮಗಳ ಕೈಗೊಳ್ಳಲು ಕೇಂದ್ರ ಸರ್ಕಾರದಿಂದ ಅನುಮೋದನೆ ಬೇಕಿದೆ. ಆದರೂ ಕೆಲವು ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೂ ಅಧಿಕಾರವಿದೆ. ವಾಹನಗಳಿಂದ ಹೊರಸೂಸುವ ಹೊಗೆಯನ್ನು ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆಂದು ಹೇಳಿದರು.

Dinesh Gundu rao
11,694 ನಿವೃತ್ತ‌ ಸಾರಿಗೆ ನೌಕರರಿಗೆ 224.05 ಕೋಟಿ ರೂ. ಗ್ರಾಚ್ಯುಟಿ ಹಣ ಬಿಡುಗಡೆ: ರಾಮಲಿಂಗಾರೆಡ್ಡಿ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com