
ಬೆಂಗಳೂರು: ರಾಮನಗರ ಜಿಲ್ಲೆಯ ಕನಕಪುರ ಮುಖ್ಯ ರಸ್ತೆಯ ದೇವರಕಗ್ಗಲಹಳ್ಳಿಯಲ್ಲಿರುವ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್'ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಅನಾಮಿಕ ವಿನಿತ್ (19) ಮೃತ ದುರ್ದೈವಿ. ಈಕೆ ಕೇರಳದ ಕಣ್ಣೂರು ಗ್ರಾಮದ ನಿವಾಸಿಯಾಗಿದ್ದು, ಹಾರೋಹಳ್ಳಿಯ ದಯಾನಂದ ಸಾಗರ ಕಾಲೇಜಿನಲ್ಲಿ ಬಿ.ಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು.
ವಸತಿ ನಿಲಯದಲ್ಲಿದ್ದ ಅನಾಮಿಕ ಊಟಕ್ಕೆ ಬಾರದಿದ್ದನ್ನು ಗಮನಿಸಿದ ಸ್ನೇಹಿತರು, ರೂಮಿಗೆ ಹೋಗಿ ಬಾಗಿಲು ತಟ್ಟಿದ್ದಾರೆ. ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಹಾಸ್ಟೆಲ್ ವಾರ್ಡನ್ ಗೆ ವಿಷಯ ತಿಳಿಸಿದ್ದಾರೆ. ವಾರ್ಡನ್ ಕೊಠಡಿಯ ಬಳಿ ಬಂದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಶವ ಇರುವುದು ಬೆಳಕಿಗೆ ಬಂದಿದೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಘಟನೆಯ ನಂತರ, ಕಾಲೇಜಿನ ವಿದ್ಯಾರ್ಥಿಗಳು 'ಜಸ್ಟೀಸ್ ಫಾರ್ ಅನಾಮಿಕಾ' ಆನ್‌ಲೈನ್ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.
ವಿದ್ಯಾರ್ಥಿನಿಯ ಪೋಷಕರು ಸಲ್ಲಿಸಿದ ದೂರಿನ ಆಧಾರದ ಮೇಲೆ ಹಾರೋಹಳ್ಳಿ ಪೊಲೀಸರು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಾಸ್ಟೆಲ್ ರೂಮಿನಲ್ಲಿ ಡೆತ್ ನೋಟ್ ಪತ್ತೆಯಾಗಿದೆ ಎಂದು ರಾಮನಗರ ಎಸ್‌ಪಿ ಆರ್ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.
Advertisement