ಬಿಟ್‌ಕಾಯಿನ್ ಹಗರಣ: SIT ವಿಚಾರಣೆ ಎದುರಿಸಿದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್!

ಬಿಟ್‌ಕಾಯಿನ್ ಹಗರಣದಲ್ಲಿ ಪೊಲೀಸ್ ಅಧಿಕಾರಿಗಳೇ ಸಾಕ್ಷ್ಯಗಳನ್ನು ನಾಶಪಡಿಸಿ, ಕ್ರಿಪ್ಟೋಕರೆನ್ಸಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಎಸ್‌ಐಟಿ ಎರಡು ಚಾರ್ಜ್‌ಶೀಟ್‌ಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿದೆ...
Mohammed Haris Nalapad
ಮೊಹಮ್ಮದ್ ನಲಪಾಡ್PTI
Updated on

ಬೆಂಗಳೂರು: ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಎಸ್‌ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದರು. ಪ್ರಕರಣ ಸಂಬಂಧ ಫೆ.7 ರಂದು ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ಜಾರಿ ಮಾಡಿತ್ತು. ಆದರೆ ವೈಯಕ್ತಿಕ ಕಾರಣಕ್ಕಾಗಿ ಇಂದೇ ಎಸ್ಐಟಿ ಮುಂದೆ ನಲಪಾಡ್ ಹಾಜರಾದರು.

2017 ಮತ್ತು 2018ರ ನಡುವೆ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ ಮಾಡಿದ ಖರ್ಚುಗಳಿಗೆ, ಐಷಾರಾಮಿ ಹೋಟೆಲ್‌ಗಳಲ್ಲಿ ವಾಸ್ತವ್ಯಕ್ಕೆ, ಪ್ರಯಾಣ ಮತ್ತು ಇತರ ಖರ್ಚುಗಳಿಗೆ ಪಾವತಿಸಿದ ಹಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಅವರ ಪುತ್ರರಾದ ಮೊಹಮ್ಮದ್ ಮತ್ತು ಅವರ ಸಹೋದರ ಒಮರ್ ಹ್ಯಾರಿಸ್ ಅವರನ್ನು 2024ರ ಜೂನ್ ನಲ್ಲಿ ಎರಡು ದಿನಗಳಿಗೂ ಹೆಚ್ಚು ಕಾಲ ವಿಚಾರಣೆ ಎದುರಿಸಿದ್ದರು. ಶ್ರೀಕಿಯನ್ನು ನವೆಂಬರ್ 2020ರಲ್ಲಿ ಬಂಧಿಸಲಾಗಿತ್ತು.

ಬಿಟ್‌ಕಾಯಿನ್ ಹಗರಣದಲ್ಲಿ ಪೊಲೀಸ್ ಅಧಿಕಾರಿಗಳೇ ಸಾಕ್ಷ್ಯಗಳನ್ನು ನಾಶಪಡಿಸಿ, ಕ್ರಿಪ್ಟೋಕರೆನ್ಸಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಎಸ್‌ಐಟಿ ಎರಡು ಚಾರ್ಜ್‌ಶೀಟ್‌ಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿದೆ ಎಂದು ಮೂಲಗಳು ತಿಳಿಸಿವೆ. 2023ರ ಜೂನ್ ನಲ್ಲಿ ಬಿಟ್‌ಕಾಯಿನ್ ಹಗರಣದ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದೆ.

2017ರ ಜೂನ್ 23ರಂದು ಕರ್ನಾಟಕದಲ್ಲಿ ಯುನೊಕಾಯಿನ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್‌ನ ಕ್ರಿಪ್ಟೋ ವಿನಿಮಯ ಕೇಂದ್ರವನ್ನು ಹ್ಯಾಕ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಮತ್ತು ಅವರ ಲೆಕ್ಕಪರಿಶೋಧಕ ರಾಬಿನ್ ಖಂಡೇಲ್ವಾಲ್ ವಿರುದ್ಧ ಕಳೆದ ವರ್ಷ ಎಸ್‌ಐಟಿ ಚಾರ್ಜ್‌ಶೀಟ್ ಸಲ್ಲಿಸಿತು. ಈ ವೇಳೆ 60.6 ಬಿಟ್‌ಕಾಯಿನ್‌ಗಳ ಕಳ್ಳತನವಾಗಿದ್ದು ಆ ಸಮಯದಲ್ಲಿ ಪ್ರತಿ ಬಿಟ್‌ಕಾಯಿನ್‌ಗೆ 1.67 ಲಕ್ಷ ರೂ. ಚಾಲ್ತಿಯಲ್ಲಿರುವ ದರದ ಆಧಾರದ ಮೇಲೆ ಇವುಗಳ ಮೌಲ್ಯ 1.14 ಕೋಟಿ ರೂಪಾಯಿಗಳಷ್ಟಿತ್ತು.

ಸಿಐಡಿಯ ಇ-ಪ್ರೊಕ್ಯೂರ್‌ಮೆಂಟ್ ಜಾಲತಾಣ ಹ್ಯಾಕ್ ಮಾಡಿ 1 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣ ಸಂಬಂಧ ಕಳೆದ ವರ್ಷ ಜೂನ್ 12ರಂದು ಮೊಹಮ್ಮದ್ ನಲಪಾಡ್ ಎಸ್ಐಟಿ ಮುಂದೆ ಹಾಜರಾಗಿದ್ದರು.

Mohammed Haris Nalapad
ಬಿಟ್ ಕಾಯಿನ್ ಹಗರಣದಲ್ಲಿ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಗೆ ಸಂಕಷ್ಟ: SIT ನೊಟೀಸ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com