ಬೆಂಗಳೂರು: ಕಾವೇರಿ 2.0 ತಂತ್ರಾಂಶ ಮತ್ತೆ ಕಾರ್ಯಾರಂಭ!

ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ಕಳೆದ ಕೆಲ ದಿನಗಳಿಂದ ಆಸ್ತಿ ನೋಂದಣಿ ಪ್ರಕ್ರಿಯೆ ಮತ್ತು ಇಸಿ/ಸಿಸಿ ಸೇವೆಗಳ ಮೇಲೆ ಪರಿಣಾಮ ಬೀರಿತ್ತು.
ಕಾವೇರಿ- 2.0 ತಂತ್ರಾಂಶ
ಕಾವೇರಿ- 2.0 ತಂತ್ರಾಂಶ
Updated on

ಬೆಂಗಳೂರು: ಒಂದು ವಾರದಿಂದ ತಾಂತ್ರಿಕ ಸಮಸ್ಯೆಗೆ ತುತ್ತಾಗಿದ್ದ ಕಾವೇರಿ 2.0 ತಂತ್ರಾಂಶ ಈಗ ಸಂಪೂರ್ಣವಾಗಿ ಪುನಃಸ್ಥಾಪಿಸಲಾಗಿದ್ದು, ಈ ತಂತ್ರಾಂಶ ಇದೀಗ ಎಂದಿನಂತೆ ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ತಿಳಿಸಿದೆ.

ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ಕಳೆದ ಕೆಲ ದಿನಗಳಿಂದ ಆಸ್ತಿ ನೋಂದಣಿ ಪ್ರಕ್ರಿಯೆ ಮತ್ತು ಇಸಿ/ಸಿಸಿ ಸೇವೆಗಳ ಮೇಲೆ ಪರಿಣಾಮ ಬೀರಿತ್ತು. ಇದು ಆದಾಯ ಸಂಗ್ರಹವನ್ನು ಮತ್ತಷ್ಟು ಕಡಿಮೆ ಮಾಡಿತ್ತು. ಇಂತಹ ಅನಿರೀಕ್ಷಿತ ದಾಳಿಗಳನ್ನು ಪರಿಹರಿಸಲು ಹಾಗೂ ಭವಿಷ್ಯದಲ್ಲಿ ಎದುರಾಗಬಹುದಾದ ಅಪಾಯಗಳನ್ನು ತಗ್ಗಿಸಲು ವರ್ಧಿತ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಗಿದೆ ಮತ್ತು ಅರ್ಜಿಯನ್ನು ರಕ್ಷಿಸಲು ಇ-ಆಡಳಿತ ಇಲಾಖೆ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಹೇಳಿದೆ.

ತಾಂತ್ರಿಕ ದಾಳಿಯ ಕಾರಣಕ್ಕೆ ಫೆಬ್ರವರಿ 1 ರಂದು ತಂತ್ರಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿತ್ತು. ಪರಿಣಾಮ ನೋಂದಣಿಗಳ ಸಂಖ್ಯೆ 556ಕ್ಕೆ ಇಳಿದಿತ್ತು. ಸಹಿ ಮಾಡಿದ ಇಸಿ (ಋಣಭಾರ ಪ್ರಮಾಣ ಪತ್ರ) ಸಂಖ್ಯೆ 1649 ಮತ್ತು ನೀಡಲಾದ ಸಿಸಿ ಸಂಖ್ಯೆ 405 ಆಗಿದ್ದು, 15,18,72,565.45 ರೂ. ಆದಾಯ ಸಂಗ್ರಹವಾಗಿದೆ. ನೋಂದಣಿ ಚಟುವಟಿಕೆಗಳು ಸಾಮಾನ್ಯ ಮಟ್ಟಕ್ಕೆ ಮರಳಿದೆ ಎಂದು ತಿಳಿಸಿದೆ.

ಫೆ.3 ರಂದು ಮಧ್ಯಂತರ ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಯಿತು. ಹೀಗಾಗಿ ನೋಂದಣಿಗಳ ಸಂಖ್ಯೆ ಅಲ್ಪ ಪ್ರಮಾಣದಲ್ಲಿ ಸುಧಾರಿಸಿತು. ಪರಿಣಾಮ 5,243 ನೋಂದಣಿಗಳಾಗಿದ್ದರೆ, 3,525 ಇಸಿಗಳನ್ನು ಸಹಿ ಮಾಡಿದ್ದು, 652 ಸಿಸಿಗಳನ್ನು ನೀಡಲಾಗಿತ್ತು. ರೂ. 52,24,42,289.78 ಆದಾಯ ಸಂಗ್ರಹವಾಗಿತ್ತು.

ಕಾವೇರಿ- 2.0 ತಂತ್ರಾಂಶ
'ಕಾವೇರಿ' ಪೋರ್ಟಲ್ ಸಮಸ್ಯೆ ಹಿಂದೆ ಪಿತೂರಿ ಶಂಕೆ: ಕಂದಾಯ ಇಲಾಖೆಯ ಅನುಮಾನ

ಫೆಬ್ರವರಿ 4 ರಂದು, ಅರ್ಜಿಗಳ ಸಂಖ್ಯೆ ಮತ್ತೊಮ್ಮೆ ಕಡಿಮೆಯಾಗಲಾರಂಭಿಸಿತ್ತು. ವಿವರವಾದ ವಿಶ್ಲೇಷಣೆಯ ನಂತರ ಅರ್ಜಿಗಳನ್ನು ಪುನಃಸ್ಥಾಪಿಸಲು ಅಗತ್ಯ ಕ್ರಮಗಳನ್ನು ಜಾರಿಗೆ ತರಲಾಯಿತು. ಪರಿಣಾಮ ತಂತ್ರಾಂಶದ ಕಾರ್ಯಕ್ಷಮತೆ ಸುಧಾರಿಸಿದೆ. 1,657 ನೋಂದಣಿಗಳು ದಾಖಲಾಗಿದ್ದು, ಇಸಿ 7,327 ಮತ್ತು ನೀಡಲಾದ ಸಿಸಿಗಳು 977 ಆಗಿದೆ. 17,13,86,591.75 ರೂ. ಆದಾಯ ಸಂಗ್ರಹವಾಗಿದೆ ಎಂದು ಮಾಹಿತಿ ನೀಡಿದೆ.

ನೋಂದಣಿ ಚಟುವಟಿಕೆಗಳು ಪ್ರಸ್ತುತ ಸಾಮಾನ್ಯ ಮಟ್ಟಕ್ಕೆ ಮರಳಿದ್ದು, ಬುಧವಾರ (ಫೆಬ್ರವರಿ 5) ಸಂಜೆ 4 ಗಂಟೆಯವರೆಗೆ ಒಟ್ಟು 7,225 ನೋಂದಣಿಗಳು ದಾಖಲಾಗಿದ್ದು, ಇಸಿಗಳು 3,903 ಮತ್ತು ಸಿಸಿಗಳು 753 ಆಗಿದೆ. 62,59,69,340 ರೂ. ಒಟ್ಟು ಆದಾಯ ಸಂಗ್ರಹವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com