landslide-hit Shirur
ಶಿರೂರು ಗುಡ್ಡ ಕುಸಿತ

ಶಿರೂರು ಗುಡ್ಡ ಕುಸಿತ ಘಟನೆ ಬಳಿಕ ಎಚ್ಚೆತ್ತ ಸರ್ಕಾರ: ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

ಶಿರೂರಿನಲ್ಲಿ ಈ ಮಳೆಗಾಲದ ಸಂದರ್ಭದಲ್ಲಿ ಪುನ: ಗುಡ್ಡ ಕುಸಿದು ಯಾವುದೇ ಅನಾಹುತವಾಗದಂತೆ ಕುರಿತಂತೆ ಜಿ.ಎಸ್‌.ಐ. ಅಧಿಕಾರಿಗಳು ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಿ, ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಳ್ಳಬೇಕು.
Published on

ಕಾರವಾರ: ಶಿರೂರುನಲ್ಲಿ ಪ್ರಸಕ್ತ ಮಳೆಗಾಲದ ಸಂದರ್ಭದಲ್ಲಿ ಪುನ: ಗುಡ್ಡ ಕುಸಿದು ಯಾವುದೇ ಅನಾಹುತವಾಗದಂತೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಬುಧವಾರ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿರೂರಿನಲ್ಲಿ ಈ ಮಳೆಗಾಲದ ಸಂದರ್ಭದಲ್ಲಿ ಪುನ: ಗುಡ್ಡ ಕುಸಿದು ಯಾವುದೇ ಅನಾಹುತವಾಗದಂತೆ ಕುರಿತಂತೆ ಜಿ.ಎಸ್‌.ಐ. ಅಧಿಕಾರಿಗಳು ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಿ, ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ನಿಗಧಿಪಡಿಸಿದ ಅವಧಿಯೊಳಗೆ ರಾಷ್ಟ್ರೀಯ ಹೆದ್ದಾರಿಯ ಎಲ್ಲಾ ಕಾಮಗಾರಿಗಳನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸುವ ಕುರಿತಂತೆ ತಮ್ಮ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ, ಬಾಕಿ ಇರುವ ಅಗತ್ಯ ಅನುಮತಿಗಳನ್ನು ಪಡೆದು, ನಿಗಧಿತ ಅವಧಿಯೊಳಗೆ ಮುಕ್ತಾಯಗೊಳಿಸಬೇಕು.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಮತ್ತು ಇತರೇ ಹೆದ್ದಾರಿಗಳಲ್ಲಿ ಗುರುತಿಸಲಾಗಿರುವ ಬ್ಲಾಕ್‌ಸ್ಪಾಟ್‌ಗಳ ಬಳಿ ತುರ್ತು ಸಂದರ್ಭದಲ್ಲಿ ಮೊಬೈಲ್ ಮೂಲಕ ಸಂಪರ್ಕಿಸಲು ಅನುಕೂಲವಾಗುವಂತೆ ಮೊಬೈಲ್ ಟವರ್‌ಗಳನ್ನು ತಪ್ಪದೇ ಅಳವಡಿಸುವಂತೆ ಬಿಎಸ್‌ಎನ್‌ಎಲ್ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಯಲ್ಲಾಪುರ ಬಳಿ ಇತ್ತೀಚೆಗೆ ನಡೆದ ಅಪಘಾತದಲ್ಲಿ ಗಾಯಳುಗಳು ತಕ್ಷಣಕ್ಕೆ ಪೊಲೀಸ್‌ಗೆ ಸಂಪರ್ಕಿಸಲು ಅಥವಾ ಇತರೇ ಯಾರನ್ನೂ ಸಂಪರ್ಕಿಸಲು ಪ್ರಯತ್ನಿಸಿದರೂ ಮೊಬೈಲ್ ಸಿಗ್ನಲ್ ದೊರಕದೆ ಇದ್ದುದು ಕಂಡು ಬಂದಿದ್ದು, ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಗುರುತಿಸಿರುವ ಅಪಘಾತ ವಲಯದಲ್ಲಿ ಬಿಎಸ್‌ಎನ್‌ಎಲ್ ವತಿಯಿಂದ ಮೊಬೈಲ್ ಟವರ್ ಅಳವಡಿಸುವ ಕಾರ್ಯವನ್ನು ಆದ್ಯತೆಯಲ್ಲಿ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

landslide-hit Shirur
ಶಿರೂರು, ವಯನಾಡ್ ದುರಂತಗಳು ಹವಾಮಾನಕ್ಕೆ ಹೊಂದಿಕೊಳ್ಳುವ ಜೀವನಶೈಲಿ ಅಳವಡಿಸಿಕೊಳ್ಳಲು ಎಚ್ಚರಿಕೆ ಗಂಟೆ: ಬಿ ಕೆ ಸಿಂಗ್

ಬ್ಲಾಕ್ ಸ್ಪಾಟ್ ಸ್ಥಳಗಳಲ್ಲಿ ಅಪಘಾತ ಮುನ್ನೆಚರಿಕೆ ಕುರಿತಂತೆ ಸೂಚನಾ ಫಲಕಗಳನ್ನು ಅಳವಡಿಸಬೇಕು, ಈ ಪ್ರದೇಶದಲ್ಲಿ ರಾತ್ರಿಯಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಇರಬೇಕು ಮತ್ತು ತುರ್ತು ಸಹಾಯವಾಣಿ ಸಂಖ್ಯೆಗಳ ವಿವರಗಳನ್ನು ನಮೂದಿಸಿದ ಫಲಕಗಳನ್ನು ಅಳವಡಿಸುವಂತೆ ಹಾಗೂ ಆ ಪ್ರದೇಶಗಳನ್ನು ಅಪಘಾತ ರಹಿತವನ್ನಾಗಿ ಮಾಡಲು ಪೊಲೀಸ್ ಇಲಾಖೆ ಸೂಚಿಸುವ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಮಾತನಾಡಿ, ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪೊಲೀಸ್ ಇಲಾಖೆ ಸೂಚಿಸುವ ಸ್ಥಳದಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು ಹಾಗೂ ಪೊಲೀಸ್ ಚೆಕ್ ಪೋಸ್ಟ್‌ ಗಳನ್ನು ನಿರ್ಮಾಣ ಮಾಡಬೇಕು. ಜಿಲ್ಲೆಗೆ ಒಳ ಬರುವ ಮತ್ತು ಜಿಲ್ಲೆಯಿಂದ ಹೊರ ಹೋಗುವ ಎಲ್ಲಾ ಗಡಿ ಪ್ರದೇಶದಲ್ಲಿ ಸಿಸಿ ಟಿವಿ ಅಳವಡಿಕೆ ಮಾಡುವಂತೆ ಮತ್ತು ಅಗತ್ಯ ಸ್ಥಳಗಳಲ್ಲಿ ಹೈಮಾಸ್ಟ್‌ ದೀಪಗಳನ್ನು ಅಳವಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿವಕುಮಾರ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಶೇಖರ್ ಹಾಗೂ ಪೊಲೀಸ್, ಸಾರಿಗೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com