Covid vaccine ಅಡ್ಡಪರಿಣಾಮ?; ಯುವ ಜನತೆಯಲ್ಲಿ ಹಠಾತ್ ಸಾವಿನ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರದಿಂದ ತಜ್ಞರ ಸಮಿತಿ ರಚನೆ

ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸುವುದಕ್ಕೆ ರಾಜ್ಯ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚಿಸಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
Siddaramaiah
ಸಿದ್ದರಾಮಯ್ಯonline desk
Updated on

ಯುವಜನತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಹಠಾತ್ ಸಾವು ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸುವುದಕ್ಕೆ ರಾಜ್ಯ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚಿಸಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಕೊರೊನಾ ಕಾಲದ ನಂತರದಿಂದ ಎಳೆಯ ವಯಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ, ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರ ಈ ಸಮಸ್ಯೆಯ ಮೂಲ ಪತ್ತೆಮಾಡಿ, ಪರಿಹರಿಸಬೇಕು ಎನ್ನುವುದು ನನ್ನ ಯೋಚನೆಯೂ ಆಗಿತ್ತು ಎಂದು ಸಿಎಂ ತಿಳಿಸಿದ್ದಾರೆ.

ತಜ್ಞರ ಸಮಿತಿ ರಚನೆಗೆ ಸಲಹೆ ನೀಡಿ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ಬರೆದ ಪತ್ರವನ್ನೂ ಉಲ್ಲೇಖಿಸಿರುವ ಸಿಎಂ, "ಇಂತಹ ಸಂದರ್ಭದಲ್ಲಿ ಈ ಸಮಸ್ಯೆಯ ಬಗ್ಗೆ ಗಮನ ಸೆಳೆದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರು ಬರೆದ ಪತ್ರ ನನ್ನ ಯೋಚನೆಯನ್ನು ಕಾರ್ಯರೂಪಕ್ಕೆ ತರಲು ಪ್ರೇರಣೆಯಾಯಿತು. ಅವರಿಗೆ ಕೃತಜ್ಞತೆಗಳು" ಎಂದು ಬರೆದಿದ್ದಾರೆ.

ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಇದೇ ವೇಳೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com