ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣಕ್ಕೆ ಸರ್ಕಾರದ ಸುಗ್ರೀವಾಜ್ಞೆ: ಅಂಕಿತ ಹಾಕದೆ ತಿರಸ್ಕರಿಸಿದ ಗವರ್ನರ್

ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ.
Thaawarchand Gehlot
ತಾವರ್ ಚಂದ್ ಗೆಹ್ಲೋಟ್
Updated on

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಅನೇಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಬೀದಿಗೆ ಬಿದ್ದಿದ್ದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ರೋಸಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಹೊರಟಿತ್ತು. ಆದರೆ, ಇದೀಗ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು ಐದು ಲಕ್ಷ ದಂಡ‌ ಹೇಗೆ ಹಾಕುತ್ತೀರಾ ಎಂದು ರಾಜ್ಯಪಾಲರು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ಇದರ ಜೊತೆಗೆ 10 ವರ್ಷಗಳ ಶಿಕ್ಷೆ ಮತ್ತು 5 ಲಕ್ಷ ರೂ.ಗಳ ದಂಡವು ವಿಪರೀತವಾಗಿದೆ ಎಂಬ ಅಂಶವನ್ನು ಒಳಗೊಂಡಂತೆ ರಾಜ್ಯಪಾಲರು ತಿರಸ್ಕಾರಕ್ಕೆ ಹಲವು ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಶಿಕ್ಷೆ ಪ್ರಮಾಣ ಹತ್ತು ವರ್ಷ ವಿಧಿಸಲಾಗಿದೆ. ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ.

ಪ್ರಾಮಾಣಿಕವಾಗಿ ಸಾಲ‌ ಕೊಟ್ಟವರಿಗೂ ಇದು ಎಫೆಕ್ಟ್ ಆಗಲಿದೆ. ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ. ಬಜೆಟ್ ಅಧಿವೇಶನದಲ್ಲಿ ಸಾದಕ-ಬಾಧಕ ಚರ್ಚಿಸಿ. ಈಗ ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮ‌ಕೈಗೊಳ್ಳುತ್ತಿಲ್ಲ. ಪೊಲೀಸರು ಸರಿಯಾದ ಕ್ರಮಕೈಗೊಳ್ಳದೇ ಇರುವುದರಿಂದ ಮತ್ತೊಂದು ಕಾನೂನಿನ ಅಗತ್ಯತೆ ಕಾಣುತ್ತಿಲ್ಲ” ಎಂದು ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ.

Thaawarchand Gehlot
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ 30 ಜನರು ಆತ್ಮಹತ್ಯೆ: ಆರ್.ಅಶೋಕ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com