Kaveri 2.0: ಕಂದಾಯ ಇಲಾಖೆ ಸಾಫ್ಟ್​ವೇರ್ ಹ್ಯಾಕ್; FIR ದಾಖಲು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ- ಸರ್ಕಾರ

ಸರ್ವರ್ ಸಮಸ್ಯೆಯಿಂದ ಕಳೆದ ಕೆಲ ದಿನಗಳಿಂದ ರಾಜ್ಯದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ರಿಜಿಸ್ಟ್ರೇಷನ್ ಕಾರ್ಯ ಸ್ಥಗಿತಗೊಂಡಿತ್ತು.
ಕಾವೇರಿ- 2.0 ತಂತ್ರಾಂಶ
ಕಾವೇರಿ- 2.0 ತಂತ್ರಾಂಶ
Updated on

ಬೆಂಗಳೂರು: ಆಸ್ತಿ ಖರೀದಿ, ಮಾರಾಟ ಸೇರಿ ನೋಂದಣಿ ಪ್ರಕ್ರಿಯೆಗೆ ಬಳಸುವ ಕಾವೇರಿ 2.0 ಸಾಫ್ಟ್​​​​ವೇರ್ ಹ್ಯಾಕ್ ಆಗಿರುವ ಬೆಳವಣಿಗೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಶನಿವಾರ ತಿಳಿಸಿದೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, 2.0 ಸಾಫ್ಟ್​​​​ವೇರ್ ಹ್ಯಾಕ್ ಆಗಿರುವ ಬೆಳವಣಿಗೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನೋಂದಣಿ ಪ್ರಕ್ರಿಯೆಗಳಿಗೆ ಅಡ್ಡಿಪಡಿಸಲು ಉದ್ದೇಶಪೂರ್ವಕವಾಗಿ ಹ್ಯಾಕ್ ಆಗಿರುವುದು ಕಂಡು ಬಂದರೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಸಂಬಂಧ ಈಗಾಗಲೇ ವ್ಯಕ್ತಿಗಳು/ಸಂಸ್ಥೆಗಳು ಯಾರು ಎಂಬುದನ್ನು ತನಿಖೆ ಮಾಡಲು ಎಫ್‌ಐಆರ್ ದಾಖಲು ಮಾಡಲಾಗಿದೆ. ಭವಿಷ್ಯದಲ್ಲಿ ಅಂತಹ ದಾಳಿಗಳನ್ನು ತಡೆಯಲು ಈ ತನಿಖೆಯು ನಮಗೆ ಸಹಾಯ ಮಾಡುತ್ತದೆ. ಅಲ್ಲದೆ, ತಜ್ಞರಿಂದ ನಮ್ಮ ಐಟಿ ವ್ಯವಸ್ಥೆಯ ಭದ್ರತಾ ಲೆಕ್ಕಪರಿಶೋಧನೆಯನ್ನು ಸ್ವತಂತ್ರವಾಗಿ ನಡೆಸಲು ಸಾಧ್ಯವಾಗುತ್ತದೆ. . ಇದು ಐಟಿ ವ್ಯವಸ್ಥೆಯನ್ನು ಬಲಪಡಿಸಲು ನಮಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಕಾವೇರಿ- 2.0 ತಂತ್ರಾಂಶ
ಬೆಂಗಳೂರು: ಕಾವೇರಿ 2.0 ತಂತ್ರಾಂಶ ಮತ್ತೆ ಕಾರ್ಯಾರಂಭ!

ಸರ್ವರ್ ಸಮಸ್ಯೆಯಿಂದ ಕಳೆದ ಕೆಲ ದಿನಗಳಿಂದ ರಾಜ್ಯದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ರಿಜಿಸ್ಟ್ರೇಷನ್ ಕಾರ್ಯ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಐಜಿಆರ್ ಪರಿಶೀಲಿಸಿದಾಗ ದುರುದ್ದೇಶದಿಂದ ಅಪರಿಚಿತರು ಕಾವೇರಿ 2.0 ಸಾಫ್ಟ್​​ವೇರ್ ಅನ್ನು ಹ್ಯಾಕ್ ಮಾಡಿ, ವೆಬ್‌ಸೈಟ್ ಪ್ರವೇಶಿಸಿ ಅದರಲ್ಲಿರುವ ಡೇಟಾಗಳನ್ನು ಕಳವು ಮಾಡಲು ನಕಲಿ ಖಾತೆಗಳನ್ನು ತೆರೆದಿರುವುದು ಬೆಳಕಿಗೆ ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com