
ಮಂಡ್ಯ: ಅಪ್ರಾಪ್ತ ಬಾಲಕಿಗೆ ಆಮಿಷ ಒಡ್ಡಿ ಅತ್ಯಾಚಾರ ಎಸಗಿದ ಆರೋಪಿಗೆ ಸ್ಥಳೀಯ ನ್ಯಾಯಾಲಯ ಶನಿವಾರ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ದಿಲೀಪ್ ಕುಮಾರ್ ಅವರು ಈ ಆದೇಶ ಹೊರಡಿಸಿದ್ದಾರೆ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ಪೋಕ್ಸೊ ಕಾಯ್ದೆಯಡಿ ನ್ಯಾಯಾಲಯ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿದೆ. ಸಂತ್ರಸ್ತೆಗೆ 50,000 ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ.
ಆರೋಪಿ 2019ರಲ್ಲಿ ಆಮಿಷವೊಡ್ಡುವ ಮೂಲಕ 17 ವರ್ಷದ ಸಂತ್ರಸ್ತೆ ಮೇಲೆ ಅತ್ಯಾಚಾರವೆಸಗಿದ್ದ. ಬಳಿಕ ಆಕೆ ಗರ್ಭಿಣಿಯಾಗಿದ್ದಳು. ಪೊಲೀಸರು ಆರೋಪಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು, ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
Advertisement