ಮಂಗಳೂರಿನಲ್ಲಿ ರಾಜ್ಯದ 2ನೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಸ್ಥಾಪಿಸಿ: ಸರ್ಕಾರಕ್ಕೆ ವೀರಪ್ಪ ಮೊಯ್ಲಿ ಆಗ್ರಹ

ಮಂಗಳೂರಿನಲ್ಲಿ ಎರಡನೇ NLSIU ಅನ್ನು ಸ್ಥಾಪಿಸುವುದರಿಂದ ಶೇ.ಮೀಸಲಾತಿ ನೀಡುವ ಮೂಲಕ ಕರ್ನಾಟಕದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸಿದಂತಾಗುತ್ತದೆ. ಅಲ್ಲದೆ, ತಂತ್ರಜ್ಞಾನ ಮತ್ತು ಕಾನೂನು; ಸೈಬರ್ ಭದ್ರತೆ; ಎಐ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಿದಂತಾಗುತ್ತದೆ.
ವೀರಪ್ಪ ಮೊಯ್ಲಿ
ವೀರಪ್ಪ ಮೊಯ್ಲಿ
Updated on

ಬೆಂಗಳೂರು: ಕರ್ನಾಟಕದ ಎರಡನೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಮಂಗಳೂರಿನಲ್ಲಿ ಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಬೆಂಗಳೂರಿನಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಕಾನೂನು ಶಾಲೆ NLSIU ಅನ್ನು ಸ್ಥಾಪಿಸಲು ಕ್ರಮಗಳ ಕೈಗೊಂಡಿದ್ದೆ. ಇದು ಅತ್ಯಂತ ಯಶಸ್ವಿ ಪ್ರಯೋಗವಾಗಿದ್ದು, ಇಂದು ಭಾರತದಲ್ಲಿ 27 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಿವೆ. ಕೆಲವು ರಾಜ್ಯಗಳು ತಮ್ಮ ತಮ್ಮ ರಾಜ್ಯಗಳಲ್ಲಿ ಒಂದಕ್ಕಿಂತ ಹೆಚ್ಚು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿವೆ, ರಾಜ್ಯದ 2ನೇ ಕಾನೂನು ವಿಶ್ವವಿದ್ಯಾಲಯವನ್ನು ಮಂಗಳೂರಿನಲ್ಲಿ ಸ್ಥಾಪಿಸಬೇಕಿದ್ದು, ಮುಂಬರುವ ಬಜೆಟ್‌ನಲ್ಲಿ ಈ ಕುರಿತು ಘೋಷಣೆ ಮಾಡುವಂತೆ ಒತ್ತಾಯಿಸಿದ್ದಾರೆ.

ಮಂಗಳೂರಿನಲ್ಲಿ ಎರಡನೇ NLSIU ಅನ್ನು ಸ್ಥಾಪಿಸುವುದರಿಂದ ಶೇ.ಮೀಸಲಾತಿ ನೀಡುವ ಮೂಲಕ ಕರ್ನಾಟಕದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸಿದಂತಾಗುತ್ತದೆ. ಅಲ್ಲದೆ, ತಂತ್ರಜ್ಞಾನ ಮತ್ತು ಕಾನೂನು; ಸೈಬರ್ ಭದ್ರತೆ; ಎಐ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಿದಂತಾಗುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಕಾನೂನು, ನಿರ್ವಹಣೆ, ತಂತ್ರಜ್ಞಾನ, ವೈದ್ಯಕೀಯ ಮತ್ತು ಸಾರ್ವಜನಿಕ ನೀತಿಯಲ್ಲಿ ನವೀನ ಕೋರ್ಸ್‌ಗಳನ್ನು ಸಂಯೋಜಿಸಲು ಸಂಸ್ಥೆಯನ್ನು ಸಕ್ರಿಯಗೊಳಿಸಲು (ರಾಷ್ಟ್ರೀಯ ಕಾನೂನು ಮತ್ತು ಸಾರ್ವಜನಿಕ ನೀತಿ ವಿಶ್ವವಿದ್ಯಾಲಯ) ಸ್ವತಂತ್ರ ಕಾನೂನಿನ ಅಗತ್ಯವಿದೆ ಎಂದೂ ತಿಳಿಸಿದ್ದಾರೆ.

2025-26ರ ಹಣಕಾಸು ವರ್ಷದಲ್ಲಿ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸಾಧ್ಯವಾದರೆ, ಮಂಗಳೂರಿನಲ್ಲಿ ಎರಡನೇ ಕಾನೂನು ಶಾಲಾ ವಿಶ್ವವಿದ್ಯಾಲಯ 2026-27ರ ಹಣಕಾಸು ವರ್ಷಕ್ಕೆ ವಾಸ್ತವವಾಗಲಿದೆ ಎಂದು ಹೇಳಿದ್ದಾರೆ.

ವೀರಪ್ಪ ಮೊಯ್ಲಿ
ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಬಿಜೆಪಿ ಪಿತೂರಿ: ಮಾಜಿ ಸಿಎಂ ವೀರಪ್ಪ ಮೊಯ್ಲಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com