ಮಂಡ್ಯ: ಟೈಯರ್ ಸ್ಫೋಟಗೊಂಡು ಹೊತ್ತಿ ಉರಿದ ಖಾಸಗಿ ಬಸ್, ಪ್ರಯಾಣಿಕರು ಪಾರು

ಅಶೋಕ ಟ್ರಾವೆಲ್ ಏಜೆನ್ಸಿಗೆ ಸೇರಿದ ಬಸ್ ಬೆಂಗಳೂರಿನಿಂದ ಕೇರಳದ ಕಣ್ಣೂರಿಗೆ ಸುಮಾರು 20 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದಾಗ ಘಟನೆ ಸಂಭವಿಸಿದೆ.
ಹಾನಿಗೊಳಗಾಗಿರುವ ಬಸ್.
ಹಾನಿಗೊಳಗಾಗಿರುವ ಬಸ್.
Updated on

ಮೈಸೂರು: ಚಲಿಸುತ್ತಿದ್ದಾಗಲೇ ಟೈಯರ್ ಸ್ಫೋಟಗೊಂಡು ಖಾಸಗಿ ಬಸ್ಸೊಂದು ಹೊತ್ತಿ ಉರಿದ ಘಟನೆ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ನಡೆದಿದೆ.

ಅಶೋಕ ಟ್ರಾವೆಲ್ ಏಜೆನ್ಸಿಗೆ ಸೇರಿದ ಬಸ್ ಬೆಂಗಳೂರಿನಿಂದ ಕೇರಳದ ಕಣ್ಣೂರಿಗೆ ಸುಮಾರು 20 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದಾಗ ಘಟನೆ ಸಂಭವಿಸಿದೆ.

ವೇಗವಾಗಿ ಬರುತ್ತಿದ್ದ ಬಸ್‌ನ ಟೈಯರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಈ ವೇಳೆ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಎಚ್ಚೆತ್ತ ಚಾಲಕ ತಕ್ಷಣ ಬಸ್ ನಿಲ್ಲಿಸಿದ್ದು, ವಾಹನದಲ್ಲಿದ್ದ ಪ್ರಯಾಣಿಕರನ್ನು ತಮ್ಮ ತಮ್ಮ ಸಾಮಾಗ್ರಿಗಳ ಜೊತೆಗೆ ಕೂಡಲೇ ಇಳಿಯುವಂತೆ ಮನವಿ ಮಾಡಿಕೊಂಡಿದ್ದಾರೆ.

ಪ್ರಯಾಣಿಕರು ಕೆಳಗಿಳಿದ ಕೆಲವೇ ನಿಮಿಷಗಳಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಬಸ್'ನ್ನು ಆವರಿಸಿದೆ. ಬಳಿಕ ಸ್ಥಳೀಯರು ಪೊಲೀಸ್ ಹಾಗೂ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದು, ಪ್ರಯಾಣಿಕರು ತಮ್ಮ ಗಮ್ಯಸ್ಥಾನ ತಲುಪಲು ಮತ್ತೊಂದು ಬಸ್ ವ್ಯವಸ್ಥೆ ಮಾಡಿದರು.

ಹಾನಿಗೊಳಗಾಗಿರುವ ಬಸ್.
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ; ಇಬ್ಬರು ಕಾರ್ಮಿಕರು ಸಜೀವ ದಹನ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com