ಹಾವೇರಿ: ಎತ್ತಿನಗಾಡಿಗೆ ಬೈಕ್ ಡಿಕ್ಕಿ; ಮೈಲಾರ ಜಾತ್ರೆಗೆ ತೆರಳುತ್ತಿದ್ದ BSc ವಿದ್ಯಾರ್ಥಿಗಳು ಸೇರಿ ಮೂವರು ಸಾವು

ಆಕಾಶ್​ ಮತ್ತು ದರ್ಶನ್​ ಅಂತಿಮ ವರ್ಷದ ಬಿಎಸ್​ಸಿ ಓದುತ್ತಿದ್ದರು. ಶಶಿಕುಮಾರ್ ಹನುಮನಮಟ್ಟಿ ಗ್ರಾಮದಲ್ಲಿನ ಹೋಟೆಲ್​ವೊಂದರಲ್ಲಿ ಕೆಲಸ ಮಾಡುತ್ತಿದ್ದರು.
Representational image
ಸಾಂದರ್ಭಿಕ ಚಿತ್ರ
Updated on

ಹಾವೇರಿ: ಎತ್ತಿನಬಂಡಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ನಡೆದಿದೆ.

ಶಶಿಕುಮಾರ್ ಉಪ್ಪಾರ (25), ಆಕಾಶ್ ಬಿರಾದಾರ (23) ಮತ್ತು ದರ್ಶನ್ (23) ಮೃತ ದುರ್ದೈವಿಗಳು. ಈ ಮೂವರು ಹನುಮನಮಟ್ಟಿಯಿಂದ ಮೈಲಾರ ಜಾತ್ರೆಗೆ ಬೈಕ್‌ನಲ್ಲಿ ಹೊರಟಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ಆಕಾಶ್​ ಮತ್ತು ದರ್ಶನ್​ ಅಂತಿಮ ವರ್ಷದ ಬಿಎಸ್​ಸಿ ಓದುತ್ತಿದ್ದರು. ಶಶಿಕುಮಾರ್ ಹನುಮನಮಟ್ಟಿ ಗ್ರಾಮದಲ್ಲಿನ ಹೋಟೆಲ್​ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Representational image
ಸಕಲೇಶಪುರ: ಕಾಫಿ ಕುಯ್ಲಿಗೆ ಕಾರ್ಮಿಕರನ್ನು ಸಾಗಿಸುತ್ತಿದ್ದ ವಾಹನ ಪಲ್ಟಿ; 14 ಮಂದಿಗೆ ಗಂಭೀರ ಗಾಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com