
ಮೈಸೂರು: ವ್ಯಕ್ತಿಯಬ್ಬ ಮಾಡಿದ ಅವಹೇಳನಕಾರಿ ಪೋಸ್ಟ್ ವಿರುದ್ಧ ಸೋಮವಾರ ರಾತ್ರಿ ಪೊಲೀಸ್ ಠಾಣೆ ಎದುರು ಇದ್ದಕ್ಕಿದ್ದಂತೆ ಸೇರಿದ ನೂರಾರು ಜನರು ಪ್ರತಿಭಟನೆ ನಡೆಸಿ, ಕಲ್ಲು ತೂರಾಡ ನಡೆಸಿದ್ದರಂದಾಗಿ ಉದ್ವಿಗ್ನಗೊಂಡಿದ್ದ ಮೈಸೂರಿನ ಉದಯಗಿರಿ ಪ್ರದೇಶದಲ್ಲಿ ಮಂಗಳವಾರ ಸಹಜ ಸ್ಥಿತಿ ಕಂಡು ಬಂದರೂ ಪರಿಸ್ಥಿತಿ ಮಾತ್ರ ಇನ್ನೂ ಬುದಿ ಮುಚ್ಚಿದ ಕೆಂಡದಂತಿದೆ. ಹೀಗಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಸಂಸದ ರಾಹುಲ್ ಗಾಂಧಿ, ಉತತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿವಸ್ತ್ರಗೊಳಿಸಿ, ಭಾವಿಚಿತ್ರಕ್ಕೆ ತಲೆ ಮೇಲೆ ಮುಸ್ಲಿಮರು ಬಳಸುವ ಟೊಪ್ಪಿ ಇಟ್ಟು, ದೇಹದ ಮೇಲೆಲ್ಲಾ ಉರ್ದು ಭಾಷೆಯ ಕೆಲ ಪದ ಬರೆದು ಪೋಸ್ಟ್ ಮಾಡಿದ್ದರಿಂದ ಮುಸ್ಲಿಂ ಸಮುದಾಯ ತೀವ್ರವಾಗಿ ಕೆರಳಿತ್ತು.
ಸಾವಿರಾರು ಮಂದಿ ಏಕಕಾಲದಲ್ಲಿ ಉದಯಗಿರಿ ಮುಖ್ಯ ರಸ್ತೆ ತಡೆದು ಪ್ರತಿಭಟನೆಗೆ ಮುಂದಾಗಿದ್ದರು. ಅಲ್ಲದೆ, ಒಂದು ಗುಂಪು ಉದಯಗಿರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿತ್ತು. ಈ ವೇಳೆ ಕೆಲ ಕಿಡಕೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಬಳಿಕ ಪೊಲೀಸರು ಲಾಠಿ ಪ್ರಹಾರ ಮಾಡಿ, ಅಶ್ರುವಾಯು ಸಿಡಿಸಿ ಗುಂಪು ಚದುರಿಸಿದ್ದರು. ಹೀಗಾಗಿ ಪರಿಸ್ಥಿತಿ ಬಿಗುವುನಿಂದ ಕೂಡಿದೆ.
ಈ ನಡುವೆ ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಗೃಹ ಸಚಿ ಪರಮೇಶ್ವರ್ ಅವರು, ಕಲ್ಲು ತೂರಾಟ ನಡೆಸಿ ದಾಂಧಲೆ ಎಬ್ಬಿಸಿದವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ಸೋಷಿಯಲ್ ಮಿಡೀಯಾದಲ್ಲಿ ಪೋಸ್ಟ್ ಮಾಡಿದ್ದಕ್ಕೆ ಒಂದು ಸಮುದಾಯವನ್ನು ಕೆರಳಿಸಿದೆ. ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಆತನನ್ನು ವಶಕ್ಕೆ ನೀಡುವಂತೆ ಇನ್ನೂರು ಜನ ಠಾಣೆ ಬಳಿ ಬಂದು ಆರೋಪಿಯನ್ನು ಗಲಾಟೆ ಮಾಡಿ, ಕಲ್ಲು ತೂರಿದ್ದಾರೆ. ಆಗ ಪೊಲೀಸರು ಅಶ್ರುವಾಯು ಸಿಡಿಸಿ, ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಕಲ್ಲು ತೂರಾಟ ನಡೆಸಿ ದಾಂಧಲೆ ಎಬ್ಬಿಸಿದವರನ್ನು ಬಂಧಿಸಿ, ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ ಎಂದರು.
ಈ ಘಟನೆಯಲ್ಲಿ ಯಾರದ್ದು ತಪ್ಪು, ಯಾರದ್ದು ಸರಿ ಎಂಬುದನ್ನು ನಾವು ನಿರ್ಧಾರ ಮಾಡಲು ಆಗುವುದಿಲ್ಲ. ಪೊಲೀಸರು ಕಾನೂನು ಪ್ರಕಾರ ಮಾಡಿರುತ್ತಾರೆ. ತಪ್ಪು ಮಾಡಿದ್ದರೆ ಪೊಲೀಸರ ಮೇಲೂ ಕ್ರಮ ತೆಗೆದುಕೊಳ್ಳುತ್ತೇವೆ. ಅನೇಕ ಸಂದರ್ಭಗಳಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್, ಪಿಎಸ್ಐಗಳನ್ನು ಅಮಾನತು ಮಾಡಲಾಗಿದೆ. ಪೊಲೀಸರ ಮೇಲು ಕ್ರಮ ಜರುಗಿಸಲಾಗಿದೆ. ಈಗಾಗಲೇ ಕಾನೂನು ಸುವ್ಯವಸ್ಥೆ ಎಡಿಜಿಪಿ ಸ್ಥಳಕ್ಕೆ ಹೋಗಿದ್ದಾರೆ ಎಂದು ತಿಳಿಸಿದರು.
Advertisement