ಹಾಲಕ್ಕಿ ಜನಾಂಗದ ಜಾನಪದ ಕೋಗಿಲೆ 'ಪದ್ಮಶ್ರೀ' ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶ

ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಎಂದೇ ಪ್ರಸಿದ್ದರಾಗಿದ್ದ ಸುಕ್ರಿ ಬೊಮ್ಮಗೌಡ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
sukri bommagowda
ಸುಕ್ರಿ ಬೊಮ್ಮಗೌಡ
Updated on

ಕಾರವಾರ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆಯಂತಿದ್ದ ಜನಪದ ಹಾಡುಗಳನ್ನು ಹಾಡುವ ಜೊತೆಗೆ ಮದ್ಯಪಾನ ವಿರೋಧಿ ಹೋರಾಟದಿಂದ ಖ್ಯಾತಿಗಳಿಸಿದ್ದ ಅಂಕೋಲಾ ತಾಲ್ಲೂಕು ಬಡಗೇರಿಯ ಸುಕ್ರಿ ಬೊಮ್ಮ ಗೌಡ (88) ಗುರುವಾರ ನಸುಕಿನ ಜಾವ ನಿಧನರಾಗಿದ್ದಾರೆ

ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಎಂದೇ ಪ್ರಸಿದ್ದರಾಗಿದ್ದ ಸುಕ್ರಿ ಬೊಮ್ಮಗೌಡ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲವು ದಿನದ ಹಿಂದೆ ಉಸಿರಾಟ ಸಮಸ್ಯೆಯಿಂದ ಉಡುಪಿಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ಆದರೆ ಇಂದು ಮುಂಜಾನೆ 4 ಗಂಟೆ ಸಮಯಕ್ಕೆ ಅಂಕೋಲದ ಬಡಿಗೇರಿಯ ಅವರ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಸುಕ್ರಿ ಬೊಮ್ಮಗೌಡ ಅವರು ಇದೀಗ ಇಬ್ಬರು ಮೊಮ್ಮಕ್ಕಳು ಓರ್ವ ಸೊಸೆಯನ್ನು ಅಗಲಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಾಲಕ್ಕಿ ಒಕ್ಕಲಿಗ ಜನಾಂಗಕ್ಕೆ ಸೇರಿದ ಸುಕ್ರಿ ಬೊಮ್ಮಗೌಡ ಅವರು ಸುಪ್ರಸಿದ್ಧ ಜಾನಪದ ಗಾಯಕಿಯಾಗಿದ್ದರು. ಸುಮಾರು 5 ಸಾವಿರ ಹಾಲಕ್ಕಿ ಹಾಡುಗಳು ಕಂಠಪಾಠವಾಗಿದ್ದವು. ಅವರು ಜಾನಪದ ಕಲೆಗೆ ನೀಡಿದ ಕೊಡುಗೆಗಳಿಗಾಗಿ ಮತ್ತು ಸಾಂಪ್ರದಾಯಿಕ ಬುಡಕಟ್ಟು ಸಂಗೀತವನ್ನು ಸಂರಕ್ಷಿಸುವ ಕಾರ್ಯಕ್ಕಾಗಿ ಹಲವು ಪ್ರಶಸ್ತಿಗಳನ್ನು ಸಂಪಾದಿಸಿದ್ದಾರೆ.

ಜನಪದ ಹಾಗೂ ಸಾಮಾಜಿಕ ಸೇವಾ ಕ್ಷೇತ್ರಕ್ಕೆ ಸುಕ್ರಿ ಬೊಮ್ಮ ಗೌಡ ನೀಡಿರುವ ಕೊಡುಗೆ ಗುರುತಿಸಿ, 1999ರಲ್ಲಿ ಜನಪದಶ್ರೀ ಪ್ರಶಸ್ತಿ, 2006ರಲ್ಲಿ ನಾಡೋಜ ಪ್ರಶಸ್ತಿ, 2017ರಲ್ಲಿ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಇನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ದೇಶ ಹಾಗೂ ರಾಜ್ಯದ ಹಲವು ಪ್ರತಿಷ್ಠಿತ ಪ್ರಶಸ್ತಿ ಸುಕ್ರಿ ಬೊಮ್ಮ ಗೌಡ ಅವರನ್ನು ಅರಸಿಕೊಂಡು ಬಂದಿವೆ.

ಸುಕ್ರಿ ಬೊಮ್ಮ ಗೌಡ ಅವರು ಸುಮಾರು 5,000 ಜಾನಪದ ಗೀತೆಗಳನ್ನು ಕಂಠಪಾಠ ಮಾಡಿದ್ದರು ಮತ್ತು ಹಲವಾರು ಸಾಮಾಜಿಕ ಚಳುವಳಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಸುಕ್ರಜ್ಜಿ ಚಿಕ್ಕ ವಯಸ್ಸಿನಲ್ಲಿಯೇ ತನ್ನ ಗಂಡನನ್ನು ಕಳೆದುಕೊಂಡರು. ಮದ್ಯದ ಚಟದಿಂದ ಬಳಲುತ್ತಿದ್ದ ಬೊಮ್ಮಗೌಡ, ಸುಕ್ರಿ ಕೇವಲ 16 ವರ್ಷದವಳಿದ್ದಾಗ 46 ನೇ ವಯಸ್ಸಿನಲ್ಲಿ ನಿಧನರಾದರು. ಅವರ ಸಾವು ಅವರ ಸಮುದಾಯದೊಳಗೆ ಸಾಮಾಜಿಕ ಚಳುವಳಿಗಳನ್ನು ಮುನ್ನಡೆಸಲು ಪ್ರೇರೇಪಿಸಿತು.

sukri bommagowda
ಸುಕ್ರಿ ಬೊಮ್ಮಗೌಡ, ಸಾಕ್ಷಿ ಮಲಿಕ್ ಸೇರಿ ಐವರಿಗೆ ಚುಂಚಶ್ರೀ ಪ್ರಶಸ್ತಿಯ ಗರಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com