ಮೆಟ್ರೋ ಪ್ರಯಾಣ​ ದರ ಏರಿಕೆ ವಿರುದ್ಧ ಪ್ರತಿಭಟನೆ: ಎಬಿವಿಪಿ ಕಾರ್ಯಕರ್ತರ ವಿರುದ್ಧ FIR

ಅನುಮತಿ ಪಡೆಯದೆ ನಾಡಪ್ರಭು ಕೆಂಪೇಗೌಡ(ಮೆಜೆಸ್ಟಿಕ್) ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಯ 16 ABVP ಕಾರ್ಯಕರ್ತರ ವಿರುದ್ಧ ಕಾಟನ್​ಪೇಟೆ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Namma Metro
ನಮ್ಮ ಮೆಟ್ರೋ online desk
Updated on

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ದುಪ್ಪಟ್ಟು ಏರಿಕೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಶನಿವಾರ ದರ ಏರಿಕೆ ಖಂಡಿಸಿ ಎಬಿವಿಪಿ ಪ್ರತಿಭಟನೆ ನಡೆಸಿತು.

ಅನುಮತಿ ಪಡೆಯದೆ ನಾಡಪ್ರಭು ಕೆಂಪೇಗೌಡ(ಮೆಜೆಸ್ಟಿಕ್) ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಯ 16 ABVP ಕಾರ್ಯಕರ್ತರ ವಿರುದ್ಧ ಕಾಟನ್​ಪೇಟೆ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಈಗಾಗಲೇ ಮೆಟ್ರೋ ದರ ಏರಿಕೆ ವಿರುದ್ಧ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಿಎಂಆರ್​ಸಿಎಲ್ ಸ್ಟೇಜ್ ಆಧಾರದಲ್ಲಿ ಸ್ವಲ್ಪ ಇಳಿಕೆ ಮಾಡಿದೆ.

Namma Metro
ಮೆಟ್ರೋ ಪ್ರಯಾಣ ದರ ಸ್ಟೇಜ್ ಆಧಾರದಲ್ಲಿ ಇಳಿಕೆ: ಬಿಎಂಆರ್​ಸಿಎಲ್ ಎಂಡಿ

ಪ್ರಯಾಣಿಕರ ಸಂಖ್ಯೆ ಇಳಿಕೆ

ಟಿಕೆಟ್ ದರ ಏರಿಕೆಯಿಂದಾಗಿ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಪ್ರತಿದಿನ ಮೆಟ್ರೋದಲ್ಲಿ 8 ರಿಂದ 9 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಆದ್ರೆ ದರ ಏರಿಕೆ ಆದ ಮೇಲೆ ಪ್ರತಿದಿನ 6 ರಿಂದ 7 ಲಕ್ಷ ಪ್ರಯಾಣಿಕರು ಮಾತ್ರ ಸಂಚಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com