ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಮಗಳನ್ನು ಕೊಂದು ತಾಯಿ ಆತ್ಮಹತ್ಯೆ!

ಪಾವಗಡ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿರುವ ಶ್ರುತಿ, ಮೊದಲು ತಮ್ಮ ಮಗಳು ರೋಶಿನಿಯನ್ನು ದುಪಟ್ಟಾ ಬಳಸಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದು ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶ್ರುತಿ
ಶ್ರುತಿ
Updated on

ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು 34 ವರ್ಷದ ಮಹಿಳೆಯೊಬ್ಬರು ತಮ್ಮ ನಾಲ್ಕು ವರ್ಷದ ಮಗಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸೋಮವಾರ ಬೆಂಗಳೂರಿನ ರಾಮಯ್ಯ ಲೇಔಟ್​ ನಡೆದಿದೆ.

ಪಾವಗಡ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿರುವ ಶ್ರುತಿ, ಮೊದಲು ತಮ್ಮ ಮಗಳು ರೋಶಿನಿಯನ್ನು ದುಪಟ್ಟಾ ಬಳಸಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದು ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಗಸಂದ್ರದ ರಾಮಯ್ಯ ಲೇಔಟ್‌ನಲ್ಲಿ ಭಾನುವಾರ ಸಂಜೆ ಶ್ರುತಿಯ ಪತಿ ಮನೆಯಲ್ಲಿ ಇಲ್ಲದಿದ್ದಾಗ ಈ ಘಟನೆ ನಡೆದಿದೆ.

ಸ್ಥಳದಿಂದ ವಶಪಡಿಸಿಕೊಳ್ಳಲಾದ ಆತ್ಮಹತ್ಯೆ ಪತ್ರದಲ್ಲಿ ಆಕೆಯ ಪತಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು ಮತ್ತು ಅವರಿಗೆ ಇನ್ನೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧವಿದೆ ಎಂದು ಬರೆದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಶೃತ್ತಿ 2014 ರಲ್ಲಿ ಗೋಪಾಲಕೃಷ್ಣ ಅವರನ್ನು ವಿವಾಹವಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಶ್ರುತಿ
ದಾವಣಗೆರೆ: ಮದುವೆಯಾಗಿ ಎರಡು ಮಕ್ಕಳಿದ್ದರೂ ಪ್ರಿಯಕರನ ಜೊತೆ ಪತ್ನಿ ಅನೈತಿಕ ಸಂಬಂಧ; ನೊಂದು ಪತಿ ನೇಣಿಗೆ ಶರಣು!

ದಂಪತಿಗಳ ನಡುವಿನ ಸಂಬಂಧ ಹದಗೆಟ್ಟಿದ್ದು, ಅವರ ಕುಟುಂಬ ನೀಡಿದ ದೂರಿನ ಪ್ರಕಾರ, ಆಡಿಟರ್ ಆಗಿ ಕೆಲಸ ಮಾಡುತ್ತಿರುವ ಗೋಪಾಲಕೃಷ್ಣ ಇನ್ನೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಗೋಪಾಲಕೃಷ್ಣ ಅವರ ಅಕ್ರಮ ಸಂಬಂಧವು ದಂಪತಿಗಳ ದಾಂಪತ್ಯದಲ್ಲಿ ಬಿರುಕು ಉಂಟುಮಾಡಿತ್ತು ಮತ್ತು ಇದು ಆಗಾಗ್ಗೆ ಜಗಳಗಳಿಗೆ ಕಾರಣವಾಯಿತು ಎಂದು ದೂರುದಾರರು ಆರೋಪಿಸಿದ್ದಾರೆ.

ಘಟನೆಯ ನಂತರ, ಮಹಿಳೆಯ ಪತಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಲಾಗಿದ್ದು, ಈ ಬಗ್ಗೆ

ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com