
ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯ ಬಜೆಟ್'ಗೆ ಸಿದ್ಧತೆ ಆರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರೈತ ಮುಖಂಡರೊಂದಿಗೆ ಸಭೆ ನಡೆಸಿ, ಮಾತುಕತೆ ನಡೆಸಿದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ವಲಯವು ಹೆಚ್ಚಿನ ಸಂಖ್ಯೆಯ ಉದ್ಯೋಗಗಳನ್ನು ಒದಗಿಸುತ್ತದೆ. ರೈತರು ನಮ್ಮ ಪ್ರಮುಖ ಆದ್ಯತೆಯಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.
ರೈತರ ಸಂಕಷ್ಟಗಳು ಮತ್ತು ಸಲಹೆಗಳನ್ನು ಆಲಿಸಿದ್ದೇನೆ. ನಮ್ಮ ಮಿತಿಗಳೊಂದಿಗೆ ಅವರ ಸಲಹೆಗಳನ್ನು ಸೇರಿಸುತ್ತೇವೆ. ಇದಲ್ಲದೆ, ಕರ್ನಾಟಕದ ರೈತರ ಕಲ್ಯಾಣವನ್ನು ಎತ್ತಿಹಿಡಿಯುವ ವಿಷಯದಲ್ಲಿ ನಮ್ಮ ಸರ್ಕಾರ ಹಿಂದೆ ಸರಿದಿಲ್ಲ. ನಾವು ಯಾವಾಗಲೂ ರೈತರ ಪರವಾಗಿರುತ್ತೇವೆ. ನಮ್ಮ ಬಜೆಟ್ ಕೃಷಿ ಮತ್ತು ಅದರ ಅಭಿವೃದ್ಧಿಯ ಪರವಾಗಿರುತ್ತದೆ ಎಂದು ಹೇಳಿದರು.
ಕರ್ನಾಟಕದ ಅನೇಕ ಜನರು ಕೃಷಿಯನ್ನು ಅವಲಂಬಿಸಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗುವುದು ಎಂದು ತಿಳಿಸಿದರು.
Advertisement