ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳಿಗೆ ಕಿಂಚಿತ್ತೂ ಅವಕಾಶ ಇಲ್ಲ, ಬಿ ಖಾತಾ ಕೊಡಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ, ಪರಿಣಾಮ‌ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ, ಸ್ಥಳೀಯ ಸಂಸ್ಥೆಗಳಿಗೆ ಆದಾಯವೂ ಬಂದ್ ಆಗಿದೆ. ಇವೆಲ್ಲಾ ಅನಾನುಕೂಲಗಳಿಗೂ ಅಂತ್ಯ ಹಾಡಬೇಕಿದೆ.
CM Siddaramaiah Video Conference
ವಿಡಿಯೋ ಸಂವಾದಲ್ಲಿ ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯದ ಮಹಾನಗರಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಜಿಲ್ಲಾಧಿಕಾರಿಗಳು, ಯೋಜನಾ ನಿರ್ದೇಶಕರು, ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪೌರಾಯುಕ್ತರು, ಮುಖ್ಯಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ, ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ಅಂತ್ಯ ಹಾಡುತ್ತಿದ್ದೇವೆ. ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲ. ಕಾಯ್ದೆ ಮೂಲಕ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡಿದ್ದೇವೆ: ಅಧಿಕಾರಿಗಳು ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಎಂದು ಸೂಚಿಸಿದರು.

ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ, ಪರಿಣಾಮ‌ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ, ಸ್ಥಳೀಯ ಸಂಸ್ಥೆಗಳಿಗೆ ಆದಾಯವೂ ಬಂದ್ ಆಗಿದೆ. ಇವೆಲ್ಲಾ ಅನಾನುಕೂಲಗಳಿಗೂ ಅಂತ್ಯ ಹಾಡಬೇಕಿದೆ.

ಕಂದಾಯ ಕಟ್ಟದಿರುವುದರಿಂದ ಇಷ್ಟೆಲ್ಲಾ ಸಮಸ್ಯೆಗಳಾಗಿವೆ. ಒಂದು ಬಾರಿ, ಇದೊಂದು ಬಾರಿ ಬಿ ಖಾತಾ ಕೊಟ್ಟು ಅಂತ್ಯ ಹಾಡ್ತೀವಿ. ಮೂರು ತಿಂಗಳು ಮಾತ್ರ ಟೈಮ್ ಕೊಟ್ಟಿದ್ದೀವಿ. ಅಷ್ಟರೊಳಗೆ ಅಭಿಯಾನ ನಡೆಸಿ ಪೂರ್ಣಗೊಳಿಸಬೇಕು. ಯಾವುದೇ ರಾಜಿ ಇಲ್ಲ. ಅಧಿಕಾರಿಗಳು ರಾಜಿ ಮಾಡಿಕೊಂಡರೆ ಸಹಿಸಲ್ಲ ಎಂದು ಎಚ್ಚರಿಕೆ ನೀಡಿದರು.

ಅನಧಿಕೃತ ಬಡಾವಣೆಗಳು ಮತ್ತೆ ತಲೆ ಎತ್ತಿದರೆ ಜಿಲ್ಲಾಧಿಕಾರಿ, ಮುಖ್ಯ ಅಧಿಕಾರಿ, ನಗರ ಯೋಜನಾ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು, ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಮಧ್ಯವರ್ತಿಗಳಿಗೆ, ಬ್ರೋಕರ್ ಗಳಿಗೆ ತಕ್ಷಣ ಗೇಟ್ ಪಾಸ್ ಕೊಡಬೇಕು. ಕಾಯ್ದೆಯ ದೂರದೃಷ್ಟಿಯನ್ನು ಸ್ಪಷ್ಟವಾಗಿ, ಖಚಿತವಾಗಿ ಅರ್ಥ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಇನ್ನೆಲ್ಲೂ ಅನಧಿಕೃತ ಬಡಾವಣೆಗಳು, ರೆವಿನ್ಯೂ ಬಡಾವಣೆಗಳು ತಲೆ ಎತ್ತಬಾರದು ಎಂದರು.

image-fallback
ಅನಧಿಕೃತ ಬಡಾವಣೆ ಹಿಂದೆ ಆಯುಕ್ತರ ಕೈವಾಡ?

ಅನಧಿಕೃತ , ರೆವಿನ್ಯೂ ಬಡಾವಣೆಗಳಲ್ಲಿ ಸೈಟು, ಮನೆ ಕಟ್ಟಿರುವವರಿಗೆ ತೊಂದರೆ ಆಗಬಾರದು. ಒಟ್ಟಾರೆಯಾಗಿ ಬಡವರು, ಮಧ್ಯಮ ವರ್ಗದವರಿಗೆ ಅನುಕೂಲ ಮಾಡಿಕೊಡಲು one time solution ಕೊಟ್ಟಿದ್ದೀವಿ. 3 ತಿಂಗಳಲ್ಲಿ ಎಲ್ಲರಿಗೂ ಖಾತಾ ನೀಡಿ ಅಂತ್ಯ ಹಾಡಬೇಕು. ಹೊಸ ಗೊಂದಲಗಳಿಗೆ ಅವಕಾಶ ಮಾಡಿಕೊಡಬೇಡಿ, ಇವತ್ತಿನಿಂದಲೇ ಬಿ ಖಾತಾ ಕೊಡಲು ಶುರು ಮಾಡಿ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com